newsfirstkannada.com

ಮಹಿಳೆಯರ ಖಾತೆಗೆ 2 ಸಾವಿರ ಯಾವಾಗ..?- ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್ಡೇಟ್​ ಕೊಟ್ರು ಹೆಬ್ಬಾಳ್ಕರ್​!

Share :

23-06-2023

    ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ 'ಗೃಹಲಕ್ಷ್ಮಿ'

    ಸದ್ಯದಲ್ಲೇ 'ಗೃಹಲಕ್ಷ್ಮಿ' ಯೋಜನೆಗೆ ಅರ್ಜಿ ಸಲ್ಲಿಕೆ ಶುರು

    'ಗೃಹಲಕ್ಷ್ಮಿ' ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು..?

ಬೆಂಗಳೂರು: ವಿಧಾನಸೌಧದಲ್ಲಿ ಇಂದು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್​​ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆ ಬಳಿಕ ಟ್ವೀಟ್​ ಮಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಗೃಹಲಕ್ಷ್ಮಿ’ ಯೋಜನೆ ಬಗ್ಗೆ ಮಹತ್ವದ ಅಪ್ಡೇಟ್​​ ಕೊಟ್ಟಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ’ ಯೋಜನೆಗೆ ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದ್ದು, ಈ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದೆ. ಈ ಕುರಿತು ಸಿಎಂ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ ಎಂದರು ಲಕ್ಷ್ಮೀ ಹೆಬ್ಬಾಳ್ಕರ್.

ಯಾವಾಗ ಅರ್ಜಿ ಸ್ವೀಕಾರ ಮಾಡಬೇಕೆನ್ನುವುದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅರ್ಜಿ ಸ್ವೀಕಾರ ಮಾಡಲಿದ್ದೇವೆ. ಆಗಸ್ಟ್ ತಿಂಗಳಲ್ಲಿ ಈ ಯೋಜನೆ ಜಾರಿಗೆ ಬರಲಿದ್ದು, ಸೇವಾಸಿಂಧು ಸರ್ವರ್ ಗೆ ಓವರ್ ಲೋಡ್ ಆಗುತ್ತಿದೆ. ಅದು ಅಪ್ಡೇಟ್ ಆದ್ರೂ ಕೂಡ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆಲ್ಲಾ ಹೊಸ ಆ್ಯಪ್ ನಲ್ಲಿ ಪರಿಹಾರ ಸಿಗಲಿದ್ದು. ಸಂಪುಟ ಸಭೆಯಲ್ಲಿ ಈ ಆ್ಯಪ್ ನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡಲಿದ್ದೇವೆ ಎಂದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಹಿಳೆಯರ ಖಾತೆಗೆ 2 ಸಾವಿರ ಯಾವಾಗ..?- ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್ಡೇಟ್​ ಕೊಟ್ರು ಹೆಬ್ಬಾಳ್ಕರ್​!

https://newsfirstlive.com/wp-content/uploads/2023/06/Laxmi-Hebbalkar-1.jpg

Load More