newsfirstkannada.com

ಜಮ್ಮು ಕಾಶ್ಮೀರದಲ್ಲಿ ಯಾತ್ರಾರ್ಥಿಗಳ ಬಸ್​ ಮೇಲೆ ಉಗ್ರರ ದಾಳಿ.. 10 ಮಂದಿ ಸಾವು

Share :

Published June 9, 2024 at 8:56pm

  ತೀರ್ಥ ಕ್ಷೇತ್ರಗಳಿಗೆ ತೆರಳುತ್ತಿದ್ದವರ ಮೇಲೆ ಭಯೋತ್ಪಾದಕರ ದಾಳಿ

  ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10 ಯಾತ್ರಾರ್ಥಿಗಳು ದಾರುಣ ಸಾವು

  ಘಟನಾ ಸ್ಥಳಕ್ಕೆ ಭೇಟಿ ಕೊಟ್ಟ ಸ್ಥಳೀಯರಿಂದ ಕಾರ್ಯಚರಣೆ

ಶ್ರೀನಗರ: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿದ್ದ ಬಸ್‌ ಕಂದಕಕ್ಕೆ ಉರುಳಿ ಬಿದ್ದಿದೆ. ಇದಕ್ಕೂ ಮೊದಲು ಈ ಬಸ್‌ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು, 10ಕ್ಕೂ ಹೆಚ್ಚು ಭಕ್ತರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: 3 ದಿನಗಳ ಹಿಂದೆ ನಾಪತ್ತೆಯಾದ ಹೆಂಡತಿ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆ!

ಯಾತ್ರಾರ್ಥಿಗಳ ಬಸ್ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಶಿವಖೋರಿಗೆ ತೆರಳುತ್ತಿತ್ತು. ಇದೇ ವೇಳೆ ಪೋನಿ ಪ್ರದೇಶದ ತೆರಯತ್ ಗ್ರಾಮದಲ್ಲಿ ಭಯೋತ್ಪಾದಕರು ಬಸ್​​ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು, ಏಕಾಏಕಿ ನಿಯಂತ್ರಣ ತಪ್ಪಿದ ಬಸ್​​ ಏಕಾಏಕಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್​​ ಸಂಪೂರ್ಣ ನಜ್ಜು ಗುಜ್ಜಾಗಿದೆ. ಕೂಡಲೇ ಅಲ್ಲಿನ ಸ್ಥಳೀಯರು ಆಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಗೊಂಡವರನ್ನು ಸಾಗಿಸಿದ್ದಾರೆ. ಈ ಘಟನೆಯಲ್ಲಿ ಇನ್ನೂ ಅಧಿಕ ಸಾವು ನೋವುಗಳು ಸಂಭವಿಸುವ ಸಾಧ್ಯತೆ ಇದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಮ್ಮು ಕಾಶ್ಮೀರದಲ್ಲಿ ಯಾತ್ರಾರ್ಥಿಗಳ ಬಸ್​ ಮೇಲೆ ಉಗ್ರರ ದಾಳಿ.. 10 ಮಂದಿ ಸಾವು

https://newsfirstlive.com/wp-content/uploads/2024/06/death6.jpg

Load More