newsfirstkannada.com

ಮಾ.​ 25ರಿಂದ SSLC ಪರೀಕ್ಷೆ ಆರಂಭ.. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

Share :

Published March 23, 2024 at 10:52am

    ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಸಂತಸ ಸುದ್ದಿ

    ಶಾಲಾ ಮುಖ್ಯಸ್ಥರು, ಅಡುಗೆ ಸಿಬ್ಬಂದಿ ಆದ್ಯತೆ ನೀಡಬೇಕು

    ಎಲ್ಲ ಸರ್ಕಾರಿ, ಅನುದಾನಿತ ಶಾಲೆಗಳಿಗೆ ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿದ್ದು, 10ನೇ ತರಗತಿ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿವೆ. ಇದರ ನಡುವೆ ಎಸ್​ಎಸ್​ಎಲ್​ಸಿ ಎಕ್ಸಾಂ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್​ನ್ಯೂಸ್ ಕೊಟ್ಟಿದೆ.

ಮಾರ್ಚ್​ 25 ರಿಂದ ಏಪ್ರಿಲ್ 6ರವರೆಗೆ 10ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ 10ನೇ ತರಗತಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸಿದ್ಧಪಡಿಸಿ ವಿತರಿಸುವಂತೆ ಶಾಲೆಗಳಿಗೆ ಸರ್ಕಾರ ಸೂಚನೆ ನೀಡಿದೆ.

ಇದನ್ನು ಓದಿ: IPL: ಅದೇ ರಾಗ, ಅದೇ ಹಾಡು.. ಕೈಕೊಟ್ಟ ಕೊಹ್ಲಿ, ಮ್ಯಾಕ್ಸಿ.. ಮೊದಲ ಪಂದ್ಯ ದೇವರಿಗೆ ಎಂದ RCB ಫ್ಯಾನ್ಸ್

ಏಪ್ರಿಲ್ 10ರ ವರೆಗೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅಡುಗೆ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುವ ಸಂದರ್ಭದಲ್ಲಿ 1 ರಿಂದ 10ನೇ ತರಗತಿಯವರೆಗಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವನ್ನು ತಪ್ಪದೆ ಪೂರೈಕೆ ಮಾಡಬೇಕು ಎಂದು ಹೇಳಲಾಗಿದೆ.

ಇದರ ಜೊತೆಗೆ ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರನ್ನು ನೀಡಬೇಕು. ಮಕ್ಕಳ ಸುರಕ್ಷತೆ ಮತ್ತು ಉತ್ತಮ ಗುಣಮಟ್ಟದ ಆರೋಗ್ಯಕರ ಆಹಾರದ ಸ್ವಚ್ಛತೆ ಮತ್ತು ನೈರ್ಮಲ್ಯ. ಈ ಅಂಶಗಳಿಗೆ ಶಾಲಾ ಮುಖ್ಯಸ್ಥರು, ನಿರ್ವಾಹಕರು ಹಾಗೂ ಅಡುಗೆ ಸಿಬ್ಬಂದಿಯವರು ಆದ್ಯತೆ ನೀಡಬೇಕು. ಮಕ್ಕಳ ಪರೀಕ್ಷೆಗೆ ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಾ.​ 25ರಿಂದ SSLC ಪರೀಕ್ಷೆ ಆರಂಭ.. ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

https://newsfirstlive.com/wp-content/uploads/2024/03/SSLC_CM.jpg

Load More