ಆಟವಾಡುತ್ತಿದ್ದಾಗ ಕರೆಂಟ್ ಶಾಕ್; ಬೆಸ್ಕಾಂ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕಿ ದುರಂತ

author-image
admin
Updated On
ಆಟವಾಡುತ್ತಿದ್ದಾಗ ಕರೆಂಟ್ ಶಾಕ್; ಬೆಸ್ಕಾಂ ನಿರ್ಲಕ್ಷ್ಯಕ್ಕೆ 11 ವರ್ಷದ ಬಾಲಕಿ ದುರಂತ
Advertisment
  • ಶಾಲೆ ರಜೆ ಇದ್ದ ಕಾರಣ ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ
  • ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಬಾಲಕಿಗೆ ಕರೆಂಟ್ ಶಾಕ್
  • ಆನೇಕಲ್‌ನ ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ

ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನಲ್ಲಿ ನಡೆದಿದೆ. ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ.

ತನಿಷ್ಕಾ ಶಾಲೆ ರಜೆ ಇದ್ದ ಕಾರಣ ಮನೆಯ ಬಳಿ ಆಟವಾಡುತ್ತಿದ್ದರು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ತನಿಷ್ಕಾ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಜಿಲ್ಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಮತ್ತೊಬ್ಬ ಯುವಕ 

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಗು ಬಲಿಯಾಗಿದೆ ಎಂದು ಕುಟುಂಬಸ್ಥರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆನೇಕಲ್ ತಾಲೂಕಿನ ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment