ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡಲು ತೆರಳಿದ್ದ ಕೂಲಿ ಕಾರ್ಮಿಕರ ದುರಂತ
ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಹಲವರ ಕೈ ಕಾಲು, ಸೊಂಟ ಮುರಿತ
ಗಾಯಗೊಂಡವರನ್ನು ಕಲಬುರಗಿ ಟ್ರಾಮಾ ಕೇರ್ ಸೆಂಟರ್‌ಗೆ ರವಾನೆ
ಕಲಬುರಗಿ: ಚಿಂಚೋಳಿ ತಾಲೂಕಿನ ಮಿರಿಯಾಣ ಗ್ರಾಮದಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ ಲಾರಿ ಪಲ್ಟಿಯಾಗಿದೆ. ಭೀಕರ ಅಪಘಾತದಲ್ಲಿ ಲಾರಿಯಲ್ಲಿದ್ದ 12 ಜನರಿಗೆ ಗಂಭೀರ ಗಾಯಗಳಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
ಲಾರಿಯಲ್ಲಿದ್ದ ಕೂಲಿ ಕಾರ್ಮಿಕರು ಕೃಷ್ಣಾಪುರ ಗ್ರಾಮದ ಬಳಿ ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡಲು ತೆರಳಿದ್ದರು. ಕೆಲಸ ಮುಗಿಸಿ ಊರಿಗೆ ವಾಪಸ್ ಹೋಗುವಾಗ ಚಾಲಕನ ನಿರ್ಲಕ್ಷ್ಯದಿಂದ ಲಾರಿ ಪಲ್ಟಿಯಾಗಿದೆ.
ಇದನ್ನೂ ಓದಿ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಮಗು ದುರಂತ ಅಂತ್ಯ; ಆಗಿದ್ದೇನು?
ಇದನ್ನೂ ಓದಿ: ಭೀಕರ ಅಪಘಾತ.. ಪುಟಾಣಿ ಮಕ್ಕಳು ಸೇರಿ 24 ಮಂದಿ ದಾರುಣ ಸಾವು; ಉಳಿದವರಿಗಾಗಿ ಹುಡುಕಾಟ!
ಕೃಷ್ಣಾಪುರ ಗ್ರಾಮದಿಂದ ತೆಲಂಗಾಣಕ್ಕೆ ಹೊರಟಿದ್ದಾಗ ಮಿರಿಯಾಣ ಗ್ರಾಮದ ಬಳಿ ಲಾರಿ ಪಲ್ಟಿಯಾಗಿದೆ. ಕಲ್ಲು ತುಂಬಿದ ಲಾರಿ ಅಡಿಯಲ್ಲಿ ಸಿಲುಕಿ ಹಲವರ ಕೈ ಕಾಲು, ಸೊಂಟ ಮುರಿದಿದೆ. ಆಸ್ಪತ್ರೆಯಲ್ಲಿ ಗಾಯಾಳುಗಳನ್ನು ರಕ್ಷಿಸೋ ಕಾರ್ಯ ಭರದಿಂದ ಸಾಗಿದೆ.
ಗಂಭೀರ ಗಾಯಗೊಂಡವರನ್ನು ಕಲಬುರಗಿ ಟ್ರಾಮಾ ಕೇರ್ ಸೆಂಟರ್‌ಗೆ ರವಾನೆ ಮಾಡಲಾಗಿದೆ. ಮಿರಿಯಾಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ