Advertisment

ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ 13 ಮಂದಿ ಸಾವು.. ಚಿಂಚೊಳ್ಳಿ ಮಾಯಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರು

author-image
Ganesh
Updated On
ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ 13 ಮಂದಿ ಸಾವು.. ಚಿಂಚೊಳ್ಳಿ ಮಾಯಮ್ಮನ ದರ್ಶನಕ್ಕೆ ತೆರಳಿದ್ದ ಭಕ್ತರು
Advertisment
  • ಹಾವೇರಿ ಜಿಲ್ಲೆಯಲ್ಲಿ ಘೋರ ದುರಂತ, 13 ಸಾವು
  • ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎಂಬ ಮಾಹಿತಿ
  • ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ, ಪರಿಶೀಲನೆ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಘೋರ ದುರಂತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಭಕ್ತರು ಸಾವನ್ನಪ್ಪಿದ್ದಾರೆ. ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂಡು ಸ್ವಗ್ರಾಮಕ್ಕೆ ವಾಪಾಸ್ ಆಗುವ ವೇಳೆ ದುರಂತ ಸಂಭವಿಸಿದೆ ಎಂದು ಮಾಹಿತಿ ಸಿಕ್ಕಿದೆ.

Advertisment

ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ ಅನಾಹುತ ನಡೆದಿದೆ. ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಸವದತ್ತಿ ಯಲ್ಲಮ್ಮನ ದರ್ಶನ ಮುಗಿಸಿ ವಾಪಸ್ ಆಗುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ.

ಇದನ್ನೂ ಓದಿ:ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ದೇವರ ದರ್ಶನಕ್ಕೆ ತೆರಳಿದ್ದ 15 ಭಕ್ತರು ದಾರುಣ ಸಾವು

publive-image

ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲು ತಯಾರಿ ನಡೆಸುತ್ತಿದ್ದಾರೆ.

Advertisment

ಇದನ್ನೂ ಓದಿ: ಭಾರೀ ಮಳೆ.. ರಾಜ್ಯದ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment