ಸಾಂಬಾರ್ ತೆಗೆದುಕೊಂಡು ಹೋಗುವಾಗ ಕಾಲು ಜಾರಿತ್ತು
ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು
ಮನೆಗೆ ಭೇಟಿ ನೀಡಿ ಕಣ್ಣೀರು ಹಾಕುತ್ತಿರುವ ಸ್ನೇಹಿತರು
ದಾವಣಗೆರೆ: ಬಿಸಿ ಸಾಂಬಾರ್ ಬಿದ್ದು ಸುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆದಿದ್ದ 13 ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. (13) ವರ್ಷದ ಸಮರ್ಥ ಮೃತ ಬಾಲಕ.
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಯಲೋದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಜ್ಜಿಯ ಮನೆಗೆ ಬಿಸಿ ಸಾಂಬಾರ್ ತೆಗೆದುಕೊಂಡು ಹೋಗುತ್ತಿದ್ದಾಗ ಕಾಲು ಜಾರಿ ಸಮರ್ಥ್ ಬಿದ್ದಿದ್ದ. ಇದರಿಂದ ಬಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು.
ಆದರೆ ಬಾಲಕನಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಮೃತ ಬಾಲಕನ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಬಾಲಕನ ಶಾಲಾ ಸ್ನೇಹಿತರು ಮನೆಗೆ ಭೇಟಿ ನೀಡಿ ಕಣ್ಣೀರು ಇಡುತ್ತಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ