ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಜೈಲು
4 ದಿನಗಳ ಹಿಂದಷ್ಟೇ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ
ಜೈಲಿನಿಂದ ವಿರಕ್ತ ಮಠ, ಮಠದಿಂದ ಮತ್ತೆ ಜೈಲಿಗೆ ಶ್ರೀಗಳು ಶಿಫ್ಟ್
ಬೆಂಗಳೂರು: 2ನೇ ಪೋಕ್ಸೋ ಕೇಸ್‌ನಲ್ಲಿ ಬಂಧನವಾಗಿರುವ ಮುರುಘಾ ಮಠದ ಶಿವಮೂರ್ತಿ ಶರಣರು ಮತ್ತೆ ಜೈಲು ಪಾಲಾಗಿದ್ದಾರೆ. ಮುರುಘಾ ಶ್ರೀಗಳನ್ನು ಇಂದು ಮಧ್ಯಾಹ್ನ ಬಂಧಿಸಿದ್ದ ದಾವಣಗೆರೆ ಪೊಲೀಸರು 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧಕ್ಕೆ ಆದೇಶಿಸಿದೆ.
14 ತಿಂಗಳ ಜೈಲುವಾಸ ಅನುಭವಿಸಿದ್ದ ಮುರುಘಾ ಸ್ವಾಮೀಜಿ 4 ದಿನಗಳ ಹಿಂದಷ್ಟೇ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇಂದು 2ನೇ ಪೋಕ್ಸೋ ಕೇಸ್‌ನಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ವಿರಕ್ತ ಮಠದಿಂದ ಬಂಧಿಸಿರುವ ಪೊಲೀಸರು ಮತ್ತೆ ಜೈಲಿಗೆ ಕರೆದೊಯ್ಯುತ್ತಿದ್ದಾರೆ. ಡಿಸೆಂಬರ್ 2ನೇ ತಾರೀಖಿನವರೆಗೂ ಮುರುಘಾ ಶ್ರೀಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಮತ್ತಷ್ಟು ಸಂಕಷ್ಟ ತಂದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ