/newsfirstlive-kannada/media/post_attachments/wp-content/uploads/2023/11/death-2023-11-15T175624.717.jpg)
ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್​ಗೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದಿನಿಂದ ನವೆಂಬರ್ 28ರವರೆಗೆ ಆರೋಪಿ ಪೊಲೀಸ್ ವಶದಲ್ಲಿ ಇರಲಿ ಎಂದು ನ್ಯಾಯಾಧೀಶ ಶ್ಯಾಮ್ ಪ್ರಕಾಶ್​​ ಅವರು ಆದೇಶ ಹೊರಡಿಸಿದ್ದಾರೆ.
/newsfirstlive-kannada/media/post_attachments/wp-content/uploads/2023/11/Udupi-Murder-case-1.jpg)
ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕುಡಚಿಯ ಸಂಬಂಧಿಕರ ಮನೆಯಲ್ಲಿ ಪ್ರವೀಣ್ ಅರುಣ್ ಚೌಗಲೆ ತಲೆಮರೆಸಿಕೊಂಡಿದ್ದ. ಆತನ ಮೊಬೈಲ್​ ಸ್ವಿಚ್​ ಆನ್​ ಆದಂತೆ ಎಚ್ಚೆತ್ತುಕೊಂಡ ಪೊಲೀಸರು ಕೂಡಲೇ ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನ ಪೊಲೀಸರು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
/newsfirstlive-kannada/media/post_attachments/wp-content/uploads/2023/11/Udupi-5.jpg)
ಇನ್ನೂ ಈ ಮೊದಲು ಆರೋಪಿ ಪೊಲೀಸ್​ ಅಧಿಕಾರಿಗಳು ಮುಂದೆ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದ. ಇದಾದ ಬಳಿಕ ಉಡುಪಿ ಪೊಲೀಸ್​ ಅಧಿಕಾರಿಗಳು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈ ಕೇಸ್​​ ಸಂಬಂಧ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಇಂದಿನಿಂದ ನವೆಂಬರ್ 28ರವರೆಗೆ ಆರೋಪಿ ಪೊಲೀಸ್ ವಶದಲ್ಲಿ ಇರಲಿ ಎಂದು ನ್ಯಾಯಾಧೀಶ ಶ್ಯಾಮ್ ಪ್ರಕಾಶ್​​ ಅವರು ಆದೇಶ ಹೊರಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us