/newsfirstlive-kannada/media/post_attachments/wp-content/uploads/2025/04/KOLKATTA-HOTEL.jpg)
ಕೋಲ್ಕತ್ತಾ ನಗರದ ಬುರ್ರಾಬಜಾರ್ ಪ್ರದೇಶದಲ್ಲಿರೋ ರಿತುರಾಜ್ ಹೋಟೆಲ್‌ನಲ್ಲಿ (Rituraj Hotel) ಭಾರೀ ಬೆಂಕಿ ಅವಘಡ ಸಂಭವಿಸಿದೆ. ಈ ದುರಂತದಲ್ಲಿ 14 ಜನರು ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಸುಮಾರು 8 ಅಗ್ನಿ ಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿ ಸತತ ರಕ್ಷಣೆ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಬೆಂಕಿಯಲ್ಲಿ ಸಜೀವ ದಹನಗೊಂಡ14 ಮೃತದೇಹವನ್ನು ಹೊರತೆಗೆಯಲಾಗಿದೆ. ಬೆಂಕಿ ಅವಘಡ ಬಗ್ಗೆ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ