newsfirstkannada.com

BREAKING: ಪಾಕಿಸ್ತಾನದಲ್ಲಿ ಹಳಿ ತಪ್ಪಿದ ರೈಲು; ಭೀಕರ ಅಪಘಾತಕ್ಕೆ 15 ಸಾವು, 50ಕ್ಕೂ ಜನರ ಸ್ಥಿತಿ ಗಂಭೀರ

Share :

06-08-2023

    ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ

    ಅಪಾಯದಲ್ಲಿ ಸಿಲುಕಿರುವವರ ಪ್ರಾಣ ಉಳಿಸಲು ಹರಸಾಹಸ

    ಪಲ್ಟಿ ಹೊಡೆದ ಹಜಾರಾ ಎಕ್ಸ್‌ಪ್ರೆಸ್ ರೈಲಿನ 10 ಬೋಗಿಗಳು

ರಾವಲ್ಪಿಂಡಿಗೆ ಹೋಗುವ ಹಜಾರಾ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ಮಗುಚಿ ಬಿದ್ದಿದೆ. ಭೀಕರ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ನವಾಬ್ಷಾ ಬಳಿ ನಡೆದಿದೆ. ಹಜಾರಾ ಎಕ್ಸ್‌ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ಮಕಾಡೆ ಮಲಗಿವೆ. ಈ ರೈಲು ದುರಂತದಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಹಜಾರಾ ಎಕ್ಸ್‌ಪ್ರೆಸ್ ರೈಲು ಕರಾಚಿಯಿಂದ ರಾವಲ್ಪಿಂಡಿಗೆ ಹೋಗುತ್ತಿದ್ದು, ಸಹರಾ ರೈಲ್ವೆ ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಸ್ಥಳೀಯರು ಪ್ರಯಾಣಿಕರ ಜೀವ ಉಳಿಸಲು ಮುಂದಾಗಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಸದ್ಯ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಘಟನಾ ಸ್ಥಳದಲ್ಲಿದ್ದ ಸ್ಥಳೀಯರು 8 ರಿಂದ 10 ಬೋಗಿಗಳು ಹಳಿ ತಪ್ಪಿ ಬಿದ್ದಿವೆ. ಅಪಘಾತ ಸಂಭವಿಸಿದ ಕೂಡಲೇ ನಾವು ರೈಲ್ವೆ ಸಿಬ್ಬಂದಿಗೆ ಮಾಹಿತಿ ನೀಡಿದ್ದೇವೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಭೀಕರ ರೈಲು ಅಪಘಾತ ಸಂಭವಿಸಿದ ಸ್ಥಳಕ್ಕೆ ಪೊಲೀಸರು, ರಕ್ಷಣಾ ಸಿಬ್ಬಂದಿ ಧಾವಿಸಿದ್ದಾರೆ. ಬೋಗಿಯ ಒಳಗೆ ಹಲವು ಪ್ರಯಾಣಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ. ದುರಂತದ ಸ್ಥಳಕ್ಕೆ ರೈಲ್ವೆ ಸಚಿವರು, ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

BREAKING: ಪಾಕಿಸ್ತಾನದಲ್ಲಿ ಹಳಿ ತಪ್ಪಿದ ರೈಲು; ಭೀಕರ ಅಪಘಾತಕ್ಕೆ 15 ಸಾವು, 50ಕ್ಕೂ ಜನರ ಸ್ಥಿತಿ ಗಂಭೀರ

https://newsfirstlive.com/wp-content/uploads/2023/08/pakisthan-5.jpg

Load More