ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ದೇವರ ದರ್ಶನಕ್ಕೆ ತೆರಳಿದ್ದ 13 ಭಕ್ತರು ದಾರುಣ ಸಾವು

author-image
Ganesh
Updated On
ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. ದೇವರ ದರ್ಶನಕ್ಕೆ ತೆರಳಿದ್ದ 13 ಭಕ್ತರು ದಾರುಣ ಸಾವು
Advertisment
  • ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ ಬಳಿ ದುರ್ಘನೆ
  • ಅಪಘಾತದಲ್ಲಿ ಓರ್ವ ಬಾಲಕ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
  • ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ

ಹಾವೇರಿ: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಹಿಂಬದಿಯಿಂದ ಲಾರಿಗೆ ಟಿಟಿ ವಾಹನ ಡಿಕ್ಕಿಯಾಗಿ 13 ಪ್ರಯಾಣಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್​ ಬಳಿ ನಡೆದಿದೆ.

ದುರ್ಘಟನೆಯಲ್ಲಿ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆಂದು ತೆರಳಿದ್ದರು. ದೇವರ ದರ್ಶನ ಮುಗಿಸಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ಮೃತರೆಲ್ಲ ಶಿವಮೊಗ್ಗ ಮೂಲದ ನಿವಾಸಿಗಳು ಎನ್ನಲಾಗಿದೆ.

ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಡಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:‘ಪ್ಲೀಸ್ ಯಾರನ್ನೂ ಭೇಟಿಗೆ ಬಿಡಬೇಡಿ..’ ಜೈಲು ಅಧಿಕಾರಿಗಳ ಮುಂದೆ ದರ್ಶನ್ ಪಶ್ಚಾತ್ತಾಪದ ಮಾತುಗಳು..?

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment