ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಮಂಜುನಾಥ್ ನಗರದ ಗೌತಮ್ ಕಾಲೇಜ್ ಬಳಿ ಭೀಕರ ಕೊಲೆ
ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿದ ಯುವಕರು
ಬೆಂಗಳೂರು: ಡ್ಯಾನ್ಸ್ ಮಾಡುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಮಂಜುನಾಥ್ ನಗರದ ಗೌತಮ್ ಕಾಲೇಜ್ ಬಳಿ ಈ ಘಟನೆ ಸಂಭವಿಸಿದ್ದು, ಸೊಹೈಲ್ (17) ಹತ್ಯೆಯಾದ ಯುವಕನಾಗಿದ್ದಾನೆ.
ಮೃತ ಯುವಕ ಸೊಹೈಲ್ ಪ್ರಥಮ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ. ಕಾಲೇಜಿನಲ್ಲಿ ಡ್ಯಾನ್ಸ್ ಮಾಡೋ ವಿಚಾರಕ್ಕೆ ಮೊದಲು ಗಲಾಟೆ ನಡೆದಿದೆ. ಬಳಿಕ ಈ ವೇಳೆ ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಬಸವೇಶ್ವರ ನಗರ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ