newsfirstkannada.com

ತಡೆಗೋಡೆಗೆ ಗುದ್ದಿ ಕಂದಕಕ್ಕೆ ಉರುಳಿದ ಬಸ್​.. ಭೀಕರ ದುರ್ಘಟನೆಯಲ್ಲಿ 18 ಪ್ರಯಾಣಿಕರು ಸಾವು

Share :

04-08-2023

    ಬಸ್ಸಿನಲ್ಲಿ 42 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು

    ಬಸ್ ಚಾಲಕನ ವಶಕ್ಕೆ ಪಡೆದು ತೀವ್ರ ವಿಚಾರಣೆ

    20 ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ದಕ್ಷಿಣ ಮೆಕ್ಸಿಕೋದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಅಮೆರಿಕ ಗಡಿಯಲ್ಲಿ ದುರ್ಘಟನೆ ಸಂಭವಿಸಿದೆ, ಮೃತರೆಲ್ಲ ಬಹುತೇಕ ವಿದೇಶಿಗರು ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ತಿಜುನಾ ಪಟ್ಟಣದ ಗಡಿಬಳಿಯಲ್ಲಿ ನಿಯಂತ್ರಣ ತಪ್ಪಿದ ಬಸ್​, ರಸ್ತೆಯ ತಡೆಗೋಡೆಗೆ ಗುದ್ದಿ ಕಂದಕಕ್ಕೆ ಉರುಳಿದೆ. ಬಸ್ಸಿನಲ್ಲಿ ಸುಮಾರು 42 ಪ್ರಯಾಣಿಕರಿದ್ದರು. ಭಾರತ, ಡೊಮಿನಿಕನ್ ರಿಪಬ್ಲಿಕ್ ಮತ್ತು ಆಫ್ರಿಕಾ ದೇಶದ ಪ್ರವಾಸಿಗರು ಬಸ್ಸಿನಲ್ಲಿದ್ದರು ಎಂದು ತಿಳಿದುಬಂದಿದೆ.

ಬಸ್ ಚಾಲಕನನ್ನು ನಯರ್ತಿ ಸ್ಟೇಟ್​ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವೇಗದಿಂದ ಚಾಲನೆ ಮಾಡಿ, ಬಸ್​ ಅನ್ನು ಬೆಂಡ್ ಮಾಡಲು ಯತ್ನಿಸಿದ ಆರೋಪ ಕೇಳಿಬಂದಿದೆ. ಇನ್ನು 20 ಜನರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತಡೆಗೋಡೆಗೆ ಗುದ್ದಿ ಕಂದಕಕ್ಕೆ ಉರುಳಿದ ಬಸ್​.. ಭೀಕರ ದುರ್ಘಟನೆಯಲ್ಲಿ 18 ಪ್ರಯಾಣಿಕರು ಸಾವು

https://newsfirstlive.com/wp-content/uploads/2023/08/BUS_ACCIDENT.jpg

Load More