/newsfirstlive-kannada/media/post_attachments/wp-content/uploads/2024/04/death5.jpg)
ಬೆಂಗಳೂರು: ಬೈಕ್​ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರೋ ಘಟನೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯರಸ್ತೆಯಲ್ಲಿ ನಡೆದಿದೆ. ರಾಕೇಶ್ (18) ಮೃತಪಟ್ಟ ಬೈಕ್ ಸವಾರ.
ಇದನ್ನೂ ಓದಿ:ಮಾವಿನ ಕಾಯಿ, ಮಾವಿನ ಹಣ್ಣು ಈ ಎರಡರಲ್ಲಿ ಆರೋಗ್ಯಕ್ಕೆ ಯಾವುದು ಬೆಸ್ಟ್?
ಮೃತ ಯುವಕ ಉತ್ತರ ಭಾರತ ಮೂಲದ ರಾಕೇಶ್. ಈತ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಹೀಗೆ ಮಾರತ್ತಹಳ್ಳಿ ಬಳಿಯ ಗುಂಜೂರು ಮುಖ್ಯ ರಸ್ತೆಯಲ್ಲಿ ಬೈಕ್​ ಮೇಲೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈಟ್ ಫೀಲ್ಡ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕೇಸ್​ ಸಂಬಂಧ ವೈಟ್ ಫೀಲ್ಡ್ ಸಂಚಾರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us