LPG cylinder: ವರ್ಷದ ಮೊದಲ ದಿನವೇ ಗುಡ್​​ನ್ಯೂಸ್​; ಸಿಲಿಂಡರ್ ಬೆಲೆಯಲ್ಲಿ ಇಳಿಕೆ

author-image
Ganesh
Updated On
ದೀಪಾವಳಿ ಹಬ್ಬಕ್ಕೆ ಸ್ಪೆಷಲ್ ಗಿಫ್ಟ್; ಅರ್ಹ ಮಹಿಳೆಯರಿಗೆ ಸರ್ಕಾರದಿಂದ ಉಚಿತ ಸಿಲಿಂಡರ್..!
Advertisment
  • ಹೊಸ ವರ್ಷದ ಸಂಭ್ರಮದಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ
  • ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ
  • ಪ್ರತಿ ತಿಂಗಳದ ಮೊದಲ ದಿನ ಸಿಲಿಂಡರ್ ಬೆಲೆಯಲ್ಲಿ ಏರಿಳಿತ

ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್​​ನ್ಯೂಸ್ ಸಿಕ್ಕಿದೆ. LPG ಗ್ಯಾಸ್ ಸಿಲಿಂಡರ್ ರಿಫಿಲ್ ಮತ್ತಷ್ಟು ಅಗ್ಗವಾಗಿದೆ. ಸರ್ಕಾರಿ ತೈಲ ಕಂಪನಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಇಳಿಕೆ ಮಾಡಲು ನಿರ್ಧರಿಸಿದ್ದು, ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಲ್ಲಿದೆ.

ಎಲ್‌ಪಿಜಿ ಸಿಲಿಂಡರ್ ಅಗ್ಗ..!

ಪ್ರತಿ ಎಲ್​​ಪಿಜಿ ಸಿಲಿಂಡರ್ ಬೆಲೆಯಲ್ಲಿ 14.50 ರೂಪಾಯಿ ಇಳಿಕೆ ಆಗಿದೆ. ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲನೇ ದಿನದಂದು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪರಿಶೀಲಿಸಿ ಹೊಸ ಬೆಲೆ ಪ್ರಕಟಿಸುತ್ತವೆ.

ಹೊಸ ವರ್ಷದಂದು ತಮ್ಮ ಗ್ರಾಹಕರಿಗೆ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕಡಿಮೆ ಮಾಡಲು ನಿರ್ಧರಿಸಿವೆ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದೆ. ಈ ಮುಂಚೆ 1927 ರೂಪಾಯಿ ಪಾವತಿ ಮಾಡಬೇಕಾಗಿತ್ತು. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ. ಚೆನ್ನೈನಲ್ಲಿ ಇವತ್ತಿನಿಂದ 19 ಕೆಜಿ ಸಿಲಿಂಡರ್​ಗೆ 1966 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.

ಇದನ್ನೂ ಓದಿ:ಭಾರತದ ನರ್ಸ್​​ಗೆ ಯೆಮೆನ್​​ನಲ್ಲಿ ಗಲ್ಲು ಶಿಕ್ಷೆ.. ಮರಣ ದಂಡನೆಗೆ ಕಾರಣವಾದ ಕತೆಯೇ ಹೃದಯ ವಿದ್ರಾವಕ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment