newsfirstkannada.com

ಚಿಕನ್ ಪ್ರಿಯರೇ ಹುಷಾರ್.. ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

Share :

Published May 9, 2024 at 9:05am

    ಶವರ್ಮಾ ತಿನ್ನುತ್ತಿದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ

    ಆಸ್ಪತ್ರೆಗೆ ದಾಖಲಿಸಿದ್ದರೂ ಬದುಕಿ ಬರಲಿಲ್ಲ 19 ವರ್ಷದ ಯುವಕ

    ಪ್ರಕರಣ ಸಂಬಂಧ ಇಬ್ಬರ ಬಂಧಿಸಿರುವ ಪೊಲೀಸ್ ಅಧಿಕಾರಿಗಳು

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ ಸೇವಿಸಿ ಸಾವನ್ನಪ್ಪಿದ್ದಾನೆ. ಪ್ರಾರ್ಥಮೇಶ್ ಮೃತ ದುರ್ದೈವಿ.

ಚಿಕನ್​​ ಶವರ್ಮಾ ಸೇವಿಸಿದ ಮರುದಿನ ಯುವಕನಿಗೆ ತೀವ್ರ ಹೊಟ್ಟೆ ನೋವು ಮತ್ತು ವಾಂತಿ ಕಾಣಿಸಿಕೊಂಡಿದೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಇದಲ್ಲದೇ ಆತನೊಂದಿಗೆ ಶವರ್ಮಾ ತಿಂದಿದ್ದ ಐವರು ಸಹ ತೀವ್ರ ಅಸ್ವಸ್ಥರಾಗಿದ್ದಾರೆ.

ಇದನ್ನೂ ಓದಿ:ಬೆಳಗ್ಗೆ ಪುಳಿಯೋಗರೆ.. ಟಿವಿ ಇಲ್ಲ.. ಜೈಲಿನಲ್ಲಿ ರೇವಣ್ಣಗೆ ಏನೆಲ್ಲ ವ್ಯವಸ್ಥೆ ಇದೆ..?

ಹಾಳಾದ ಕೋಳಿಯನ್ನು ಶವರ್ಮಾದಲ್ಲಿ ಬಳಸಿದಕ್ಕಾಗಿ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧ ಮಹಾರಾಷ್ಟ್ರ ಪೊಲೀಸರು ಶವರ್ಮಾ ಅಂಗಡಿ ನಡೆಸುತ್ತಿದ್ದ ಇಬ್ಬರ ವಿರುದ್ಧ ಕೇಸ್​​ ದಾಖಲಿಸಿದ್ದಾರೆ. ಇಬ್ಬರ ಬಂಧನ ಕೂಡ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:KL ರಾಹುಲ್​​ಗೆ ಭಾರೀ ಅವಮಾನ.. ಸಾರ್ವಜನಿಕವಾಗಿ ನಿಂದಿಸಿದ ಎಲ್​ಎಸ್​ಜಿ ಮಾಲೀಕ..! ವಿಡಿಯೋ

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಚಿಕನ್ ಪ್ರಿಯರೇ ಹುಷಾರ್.. ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

https://newsfirstlive.com/wp-content/uploads/2024/05/chicken-shawarma.jpg

Load More