newsfirstkannada.com

ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಸಾವು; ಅನ್ನದಾತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಕ್ರಮಕ್ಕೆ ನಿರ್ಧಾರ

Share :

Published February 23, 2024 at 9:21am

Update February 23, 2024 at 12:07pm

  NSA ಅಡಿಯಲ್ಲಿ ಕಾನೂನು ಕ್ರಮಕ್ಕೆ ಮುಂದಾದ ಪೊಲೀಸರು

  ಹಿಂಸಾಚಾರದಲ್ಲಿ 30 ಭದ್ರತಾ ಸಿಬ್ಬಂದಿಗೆ ಗಾಯ, ಹಲವರು ಗಂಭೀರ

  ಹರಿಯಾಣದಲ್ಲಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ

ಹರಿಯಾಣದ ಅಂಬಾಲದಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿ, 30 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಿಂಸಾಚಾರ ಹಿನ್ನೆಲೆಯಲ್ಲಿ ರೈತ ನಾಯಕರ ವಿರುದ್ಧ ಪೊಲೀಸರು ನ್ಯಾಷನಲ್ ಸೆಕ್ಯೂರಿಟಿ ಆ್ಯಕ್ಟ್ (NSA) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಂಬಾಲಾ ಪೊಲೀಸರು ಪ್ರೆಸ್​ನೋಟ್ ಬಿಡುಗಡೆ ಮಾಡಿದ್ದಾರೆ. ‘ಡೆಲ್ಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರು, ಬ್ಯಾರಿಕೇಡ್​ಗಳನ್ನು ಕಿತ್ತು ಹಾಕಲು ನಿರಂತರ ಪ್ರಯತ್ನವನ್ನು ಮಾಡುತ್ತಿದ್ದಾರೆ. ಪೊಲೀಸರು ಅಲ್ಲಿಗೆ ಹೋದರೆ ಕಲ್ಲುಗಳನ್ನು ಎಸೆಯುತ್ತಿದ್ದಾರೆ.

ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುತ್ತಿದ್ದಾರೆ. ಈ ಮೂಲಕ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ನಿರಂತರ ಹಿಂಸಾಚಾರದಿಂದ 30 ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳ ತಲೆಗಳಿಗೆ ಗಂಭೀರ ಏಟು ಬಿದ್ದಿದೆ ಎಂದು ತಿಳಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಫೆಬ್ರವರಿ 13 ರಿಂದ ರೈತ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಸಾವು; ಅನ್ನದಾತರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಕ್ರಮಕ್ಕೆ ನಿರ್ಧಾರ

https://newsfirstlive.com/wp-content/uploads/2024/02/FARMERS_PROTEST_1.jpg

Load More