newsfirstkannada.com

ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ – EC ಘೋಷಣೆಗೂ ಮೊದಲೇ ಯಡವಟ್ಟು ಮಾಡಿದ ಕಾಂಗ್ರೆಸ್ ನಾಯಕ

Share :

Published March 14, 2024 at 2:30pm

    ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ

    ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಯುಕ್ತರ ನೇಮಕ

    1988 ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಗಳ ನೇಮಕ ಆಗಿದೆ

ಲೋಕಸಭೆಯ ಕಾಂಗ್ರೆಸ್​ ನಾಯಕ ಅಧೀರ್ ರಂಜನ್ ಚೌಧರಿ ಯಡವಟ್ಟು ಮಾಡಿಕೊಂಡಿದ್ದಾರೆ. ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ (Gyanesh Kumar) ಮತ್ತು ಬಲ್ವಿಂದರ್ ಸಂಧು (Sukhbir Singh Sandhu) ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.

ಚುನಾವಣಾ ಆಯೋಗ ಘೋಷಣೆಗೂ ಮೊದಲೇ ಕಾಂಗ್ರೆಸ್​ ನಾಯಕ ಹೇಳಿರೋದು ಚರ್ಚೆಗೆ ಕಾರಣವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ನಾನು ಮತ್ತು ಅರ್ಜುನ್ ರಾಮ್ ಮೇಘವಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕಾಂಗ್ರೆಸ್​ ನಾಯಕ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗವು ತಯಾರಿ ನಡೆಸುತ್ತಿರುವಾಗ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್​ಗೆ ಸಹಾಯ ಮಾಡಲು ಇಬ್ಬರು ಚುನಾವಣಾ ಆಯುಕ್ತರ ಅವಶ್ಯಕತೆ ಇತ್ತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜ್ಞಾನೇಶ್ ಕುಮಾರ್ ಮತ್ತು ಬಲ್ವಿಂದರ್ ಸಂಧು ಅವರನ್ನು ಆಯ್ಕೆ ಮಾಡಲಾಗಿದೆ. ಸಂಧು ಮತ್ತು ಶ್ರೀ ಕುಮಾರ್ 1988-ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಗಳಾಗಿದ್ದಾರೆ. ಸಂಧು ಐಎಎಸ್‌ನ ಉತ್ತರಾಖಂಡ್ ಕೇಡರ್‌ನಿಂದ ಬಂದಿದ್ದರೆ, ಕುಮಾರ್ ಕೇರಳ ಕೇಡರ್‌ನಿಂದ ಬಂದವರು.

ಇನ್ನು ಆಯ್ಕೆ ಸಮಿತಿ ಸಭೆಯ ಬಗ್ಗೆಯೂ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಚೌಧರಿ, ಈ ಸಭೆಯಲ್ಲಿ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿಗಳು ಇರಬೇಕಾಗಿತ್ತು. ಅವರನ್ನು ಬಿಟ್ಟು ಕೇಂದ್ರ ಸರ್ಕಾರ ಸಭೆ ನಡೆಸಿದೆ. ಇಂತಹ ನಿರ್ಧಾರ ಒಳ್ಳೆಯದಲ್ಲ ಎಂದು ಕಿಡಿಕಾರಿದ್ದಾರೆ. ಸಿಇಸಿ ರಾಜೀವ್ ಕುಮಾರ್ ಆಯ್ಕೆ ಸಮಿತಿ ಸಭೆಯಲ್ಲಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಇಬ್ಬರು ನೂತನ ಚುನಾವಣಾ ಆಯುಕ್ತರ ನೇಮಕ – EC ಘೋಷಣೆಗೂ ಮೊದಲೇ ಯಡವಟ್ಟು ಮಾಡಿದ ಕಾಂಗ್ರೆಸ್ ನಾಯಕ

https://newsfirstlive.com/wp-content/uploads/2024/03/EC.jpg

Load More