Advertisment

ಮಹಿಳೆಯರನ್ನ ಜೀವಂತ ಸಮಾಧಿ ಮಾಡಲು ಮುಂದಾಗಿದ್ದ ದುಷ್ಕರ್ಮಿಗಳು.. ಭಯಾನಕ ಘಟನೆ!

author-image
Bheemappa
Updated On
ಮಹಿಳೆಯರನ್ನ ಜೀವಂತ ಸಮಾಧಿ ಮಾಡಲು ಮುಂದಾಗಿದ್ದ ದುಷ್ಕರ್ಮಿಗಳು.. ಭಯಾನಕ ಘಟನೆ!
Advertisment
  • ಓಡಿ ಬಂದು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ ಗ್ರಾಮಸ್ಥರು
  • ಜಮೀನಿಗೆ ಹೋಗಿದ್ದ ಮಹಿಳೆಯರ ಮೇಲೆ ಮಣ್ಣು ಸುರಿದು ದುಷ್ಕೃತ್ಯ!
  • ಇಂಥ ಹೃದಯ ವಿದ್ರಾವಕ ಘಟನೆಗೆ ಎಲ್ಲೆಡೆಯಿಂದ ಭಾರೀ ವಿರೋಧ

ಭೋಪಾಲ್: ಜಮೀನಿನ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಜೀವಂತವಾಗಿ ಸಮಾಧಿ ಮಾಡಲು ಮುಂದಾಗಿರುವಂತ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯ ಹಿನೌಟಾ ಗ್ರಾಮದಲ್ಲಿ ನಡೆದಿದೆ.

Advertisment

ಇದನ್ನೂ ಓದಿ: ಅಮೆರಿಕದ ಅಧ್ಯಕ್ಷರಾಗ್ತಾರಾ ಭಾರತ ಮೂಲದ ಕಮಲಾ ಹ್ಯಾರಿಸ್.. ಜೋ ಬೈಡನ್​ ಹೇಳಿದ್ದೇನು?

ಹಿನೌಟಾ ಗ್ರಾಮದ ನಿವಾಸಿಗಳಾದ ಮಮತಾ ಪಾಂಡೆ ಮತ್ತು ಆಶಾ ಪಾಂಡೆ ಎಂಬ ಇಬ್ಬರನ್ನು ಜೀವಂತ ಸಮಾಧಿ ಮಾಡಲು ದುಷ್ಕರ್ಮಿಗಳು ಮುಂದಾಗಿದ್ದರು. ಸದ್ಯ ಇದರಲ್ಲಿನ ಓರ್ವ ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಇಂದಿನಿಂದ ಪವಿತ್ರ ಶ್ರಾವಣ ತಿಂಗಳು ಆರಂಭ: ಶ್ರಾವಣದ ವಿಶೇಷತೆ, ಮಹತ್ವಗಳೇನು.?

Advertisment

ರಸ್ತೆ ಕಾಮಗಾರಿ ಕೆಲಸ ನಡೆಯುತ್ತಿದ್ದು ಇದು ಮಹಿಳೆಯರ ಜಮೀನಿನಲ್ಲಿ ಹಾದು ಹೋಗುತ್ತದೆ. ಹೀಗಾಗಿ ಇದಕ್ಕೆ ಮಹಿಳೆಯರು ಮಣ್ಣು ಹಾಕದಂತೆ ಬೆಂಜ್​ ಲಾರಿಯನ್ನು ತಡೆದಿದ್ದಾರೆ. ಅಲ್ಲೇ ಇದ್ದ ಪ್ರಬಲ ವ್ಯಕ್ತಿಗಳು ಇವರನ್ನು ಅಲ್ಲಿಂದ ಕಳುಹಿಸಲು ಸಾಕಷ್ಟು ಪ್ರಯತ್ನಿಸಿದ್ದಾರೆ. ಆದರೆ ಇದ್ಯಾವುದಕ್ಕೂ ಮಣಿಯದ ಮಹಿಳೆಯರ ಮೇಲೆ ಮಣ್ಣು ಸುರಿಯುವಂತೆ ಲಾರಿ ಡ್ರೈವರ್​ಗೆ ದುಷ್ಕರ್ಮಿಗಳು ಹೇಳಿದ್ದಾರೆ. ಅವರು ಹೇಳಿದಂತೆ ಲಾರಿಯಲ್ಲಿದ್ದ ಜಲ್ಲಿಕಲ್ಲು ಮಿಶ್ರಿತ ಮಣ್ಣನ್ನು ಮಹಿಳೆಯರ ಮೇಲೆ ಸುರಿದು ಜೀವಂತ ಸಮಾಧಿ ಮಾಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಬೆಂಗಳೂರಿನ ಯುವಕ ಜೋಗ ಜಲಪಾತದಲ್ಲಿ ಕಣ್ಮರೆ.. ಶೋಧ ಕಾರ್ಯ

ಆದರೆ ಈ ಮಾಹಿತಿ ತಿಳಿಯುತ್ತಿದ್ದಂತೆ ಜಮೀನಿಗೆ ಓಡಿ ಬಂದ ಗ್ರಾಮಸ್ಥರು ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಓರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಈ ಸಂಬಂಧ ಮಂಗಾವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಕೊಲೆ ಯತ್ನದಡಿ ಕೇಸ್​ ದಾಖಲು ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisment

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
Advertisment
Advertisment