newsfirstkannada.com

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ.. ಸಾವು ಬದುಕಿನ ನಡುವೆ ಹೋರಾಟ; ರಕ್ಷಿಸಲು ಹರಸಾಹಸ

Share :

Published April 3, 2024 at 8:00pm

Update April 3, 2024 at 8:01pm

    ಸ್ಥಳದಲ್ಲೇ ಬೀಡು ಬಿಟ್ಟ ಹಿರಿಯ ಆರೋಗ್ಯ ಇಲಾಖೆ ಸಿಬ್ಬಂದಿಗಳು

    ಅಗ್ನಿ ಶಾಮಕ ಸಿಬ್ಬಂದಿಯಿಂದ ಮುಂದುವರೆದ ಕಾರ್ಯಾಚರಣೆ

    ಮಗು ಬಿದ್ದ ಸ್ಥಳಕ್ಕೆ ಆಕ್ಸಿಜನ್ ಪೂರೈಕೆಗೆ ಪ್ರಯತ್ನ ನಡೆಸಲಾಗುತ್ತಿದೆ

ವಿಜಯಪುರ: ಆಟ ಆಡುತ್ತಿದ್ದಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿರೋ ಎರಡು ವರ್ಷದ ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಸಾತ್ವಿಕ್ ಮುಜಗೊಂಡ ಎಂಬ ಬಾಲಕನು 16 ಅಡಿ ಆಳದ ಕೊಳವೆ ಬಾವಿಯಲ್ಲಿ ಬಿದ್ದಿದ್ದಾನೆ. ಈ ಘಟನೆ ನಡೆದಿದ್ದು ಇಂಡಿ ತಾಲೂಕಿನ‌ ಲಚ್ಯಾಣ ಗ್ರಾಮದ ಜಮೀನಿನಲ್ಲಿ.

ಇದನ್ನೂ ಓದಿ: BREAKING: ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು

ಇನ್ನು, ಈ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಜೊತೆಗೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ದೌಡಾಯಿಸಿ ಘಟನಾ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಕೊಳವೆ ಬಾವಿಯಲ್ಲಿ ಬಿದ್ದ ಬಾಲಕನನ್ನು ಜೆಸಿಬಿ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದರ ಜೊತೆಗೆ ಆಕ್ಸಿಜನ್ ಪೂರೈಕೆಗೆ ಪ್ರಯತ್ನ ನಡೆಸಲಾಗುತ್ತಿದೆ.

ಇನ್ನು ಮಗು ಆಟ ಆಡುತ್ತಿದ್ದಾಗ ಆಯತಪ್ಪಿ ಕೊಳವೆ ಬಾವಿಗೆ ಬಿದ್ದ ವಿಷಯ ತಿಳಿದ ಕೂಡಲೇ ಇಡೀ ಗ್ರಾಮಸ್ಥರು ದೌಡಾಯಿಸಿದ್ದಾರೆ. ಇನ್ನು ಬಾಲಕನ ಕುಟುಂಬಸ್ಥರ ದುಃಖ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ.. ಸಾವು ಬದುಕಿನ ನಡುವೆ ಹೋರಾಟ; ರಕ್ಷಿಸಲು ಹರಸಾಹಸ

https://newsfirstlive.com/wp-content/uploads/2024/04/boy3.jpg

Load More