ಮಧ್ಯ ಪ್ರದೇಶ: 2019ರ ಲೋಕಸಭಾ ಚುನಾವಣೆ ಅಂತಿಮ ಹಂತ ತಲುಪಿದೆ. ಇದೇ ತಿಂಗಳ 19ರಂದು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಇನ್ನೇನು ಚುನಾವಣೆ ಕಾವು ಸುಮ್ಮನಾಗುತ್ತೆ ಎಂದುಕೊಳ್ಳುತ್ತಿದ್ದಂತೆ, ರಾಜಕೀಯ ಮುಖಂಡರ ಹೇಳಿಕೆಗಳು ಚುನಾವಣಾ ಕಾವನ್ನು ಮತ್ತಷ್ಟು ಹೆಚ್ಚಿಸುತ್ತಿವೆ.
ಕೆಲ ದಿನಗಳ ಹಿಂದೆ ಪ್ರಚಾರದ ವೇಳೆ ನಟ, ಮಕ್ಕಲ್ ನಿಧಿ ಮೈಮ್ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್, ಮಹಾತ್ಮ ಗಾಂಧಿಯವರನ್ನು ಹತ್ಯೆಗೈದಿದ್ದ ನಾಥುರಾಮ್ ಗೋಡ್ಸೆ ಹಿಂದೂ ಉಗ್ರ ಎಂಬ ಹೇಳಿಕೆ ನೀಡುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ರು. ಕಮಲ್ ಹೇಳಿಕೆಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್, ನಾಥುರಾಮ್ ಗೂಡ್ಸೆ ದೇಶಭಕ್ತ ಎಂಬ ಹೇಳಿಕೆ ನೀಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಅಲ್ಲದೇ, ನಾಥುರಾಮ್ ಮುಂದೆಯೂ ದೇಶಭಕ್ತರಾಗಿಯೇ ಉಳಿಯುತ್ತಾರೆ. ಅವರನ್ನು ಉಗ್ರ ಎನ್ನುವವರು ತಮ್ಮನ್ನು ತಾವೇ ನೋಡಿಕೊಳ್ಳಬೇಕು. ಈ ಬಾರಿ ಚುನಾವಣೆಯಲ್ಲಿ ಜನರು ಅವರಿಗೆ ತಕ್ಕ ಉತ್ತರ ನೀಡುತ್ತಾರೆ ಅಂತಾ ಪ್ರಜ್ಞಾ ಸಿಂಗ್ ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post