ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ಉಗ್ರರು ಮಹಿಳೆಯೊಬ್ಬರನ್ನ ಗುಂಡಿಟ್ಟು ಕೊಂದಿದ್ದಾರೆ. ನಿಗೀನಾ ಬಾನೋ ಮೃತ ಮಹಿಳೆ. ಇಂದು ಬೆಳಗ್ಗೆ ಇಲ್ಲಿನ ನರ್ಬಾಲ್ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಉಗ್ರರು ಫೈರಿಂಗ್ ಮಾಡಿದ್ದಾರೆ. ಈ ವೇಳೆ ನಿಗೀನಾ ಬಾನೋ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಇದೇ ವೇಳೆ ಮೊಹಮ್ಮದ್ ಸುಲ್ತಾನ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post