ಕೊಡಗು: ಮಳೆಗಾಗಿ ಸರ್ಕಾರದ ವತಿಯಿಂದ ವಿಶೇಷ ಪೂಜೆಗೆ ಸೂಚನೆ ಹಿನ್ನೆಲೆಯಲ್ಲಿ ಕೊಡಗಿನ ಓಂಕಾರೇಶ್ವರ ಹಾಗೂ ಭಗಂಡೇಶ್ವರ ದೇವಾಲಯದಲ್ಲಿ ಪೂಜೆ ನಡೆಸಲಾಯಿತು. ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಾಲಯದಲ್ಲಿ ಮಳೆಗಾಗಿ ಬ್ರಾಹ್ಮಿ ಮುಹೂರ್ತದಲ್ಲಿ ಮುಂಜಾನೆ 5 ಗಂಟೆಯಿಂದ 6:50ರ ವರೆಗೆ ಪೂಜೆ ಸಲ್ಲಿಸಲಾಯಿತು. ಪರ್ಜನ್ಯ ಜಪ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಬಗೆಯ ಪೂಜೆಗಳನ್ನ ಮಾಡಲಾಯಿತು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post