ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಹಾಗೂ ಓರ್ವ ಟಿಎಂಸಿ ಕಾರ್ಯಕರ್ತ ಮೃತಪಟ್ಟಿದ್ದಾನೆ.
ಭಾರತ-ಬಾಂಗ್ಲಾ ಗಡಿ ಪ್ರದೇಶದ ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಲಿ ಎಂಬ ಊರಲ್ಲಿದ್ದ ಬಿಜೆಪಿ ಬಾವುಟವನ್ನು ತೆಗೆಯುವ ವಿಚಾರಕ್ಕೆ ನಿನ್ನೆ ಸಂಜೆ ಗಲಾಟೆ ನಡೆದಿದೆ. ಬಳಿಕ ಗಲಾಟೆ ವಿಕೋಪಕ್ಕೆ ತಿರುಗಿ ಉಭಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ಘರ್ಷಣೆ ನಡೆದಿದೆ. ಈ ವೇಳೆ ಬಿಜೆಪಿ ಕಾರ್ಯಕರ್ತರಾದ ಸುಕಾಂತ್, ಪ್ರದೀಪ್ ಹಾಗೂ ಟಪಾನ್ ಮೃತಪಟ್ಟಿದ್ದಾರೆ.
ಹಾಗೂ ಟಿಎಂಸಿಯ ಕಾಯುಮ್ ಮೊಲ್ಲಾಹ್ ಕೂಡ ಸಾವನ್ನಪ್ಪಿದ್ದಾನೆ. ಎರಡೂ ಪಕ್ಷಗಳ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಇನ್ನೂ ಘರ್ಷಣೆಯ ನಂತರ ಒಟ್ಟು 18 ಬಿಜೆಪಿ ಕಾರ್ಯಕರ್ತರು ಕಾಣೆಯಾಗಿದ್ದಾರೆ ಅಂತಾ ಪಶ್ಚಿಮ ಬಂಗಾಳ ಬಿಜೆಪಿ ಘಟಕ ಹೇಳಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಮುಕುಲ್ ರಾಯ್, ಟಿಎಂಸಿ ಗೂಂಡಾಗಳ ಗುಂಡಿನ ದಾಳಿಗೆ ನಮ್ಮ ಮೂವರು ಕಾರ್ಯಕರ್ತರು ಬಲಿಯಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ವಿರುದ್ಧ ನಡೆಯುತ್ತಿರುವ ಹಿಂಸಾಚಾರಕ್ಕೆ ಮಮತಾ ಬ್ಯಾನರ್ಜಿ ಸಂಪೂರ್ಣ ಜವಾಬ್ದಾರಿ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ನೀಡುತ್ತೇವೆ ಅಂತಾ ಹೇಳಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post