ಕೋಲ್ಕತ್ತಾ: ಉತ್ತರ 24 ಪರಗಣ ಜಿಲ್ಲೆಯ ಬಸೀರತ್ನಲ್ಲಿ ನಡೆದ ಘರ್ಷಣೆಯಲ್ಲಿ ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದ್ದನ್ನು ಖಂಡಿಸಿ ಇಂದು ಪಶ್ಚಿಮ ಬಂಗಾಳದಾದ್ಯಂತ ಬ್ಲ್ಯಾಕ್ ಡೇ ಆಚರಿಸಲು ಕೇಸರಿ ಪಡೆ ನಿರ್ಧರಿಸಿದೆ. ಘರ್ಷಣೆ ನಡೆದ ಸ್ಥಳವಾದ ಬಸೀರಹತ್ನಲ್ಲಿ 12ಗಂಟೆಗಳ ಕಾಲ ಬಂದ್ಗೆ ಕರೆ ಕೊಟ್ಟಿದೆ. ಇನ್ನು ಕಾರ್ಯಕರ್ತರ ಮೃತದೇಹಗಳನ್ನು ಬಸಂತಿ ಹೆದ್ದಾರಿಯಲ್ಲಿ ಅಂತ್ಯಕ್ರಿಯೆ ನಡೆಸಲು ಬಿಜೆಪಿ ಸಿದ್ಧತೆ ನಡೆಸಿತ್ತು. ಆದ್ರೆ ಇದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.
ಇನ್ನು ದೀದಿ ಸರ್ಕಾರದ ವಿರುದ್ಧ ಬಂಗಾಳದ ಬಿಜೆಪಿ ಘಟಕ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ದೂರು ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರ ಬರೆದಿರುವ ಅಮಿತ್ ಶಾ, ಕೆಲ ವಾರಗಳಿಂದ ಹಿಂಸಾಚಾರ ಪ್ರಕರಣಗಳು ಕೇಳಿ ಬರುತ್ತಿರುವುದು ಕಾನೂನು ಸುವ್ಯವಸ್ಥೆ ಪಾಲಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದನ್ನು ತೋರಿಸುತ್ತೆ. ಸಮಾಜದಲ್ಲಿ ಶಾಂತಿ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಿ. ಸರಿಯಾಗಿ ಕರ್ತವ್ಯ ಪಾಲನೆ ಮಾಡದ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡು, ಬಂಗಾಳದ ಸದ್ಯದ ಸ್ಥಿತಿಗತಿಯ ಬಗ್ಗೆ ವರದಿ ನೀಡಬೇಕು ಅಂತಾ ಹೇಳಿದ್ದಾರೆ. ಅಮಿತ್ ಶಾ ಪತ್ರಕ್ಕೆ ಪ್ರತ್ಯುತ್ತರವಾಗಿ ಪತ್ರ ಬರೆದ ಸಿಎಂ ಮಮತಾ ಬ್ಯಾನರ್ಜಿ, ಬಂಗಾಳದಲ್ಲಿ ಪರಿಸ್ಥಿತಿ ಹತೋಟಿಗೆ ಬಂದಿದೆ. ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿಲ್ಲ ಎಂದಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post