ನವದೆಹಲಿ: ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ತಮ್ಮನ್ನು ಅನರ್ಹ ಮಾಡಿರುವ ವಿಚಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತೆ ಅನರ್ಹ ಶಾಸಕರು ಸುಪ್ರಿಂ ಕೋರ್ಟ್ಗೆ ಮನವಿ ಮಾಡಿದ್ದಾರೆ. ಆದ್ರೆ ತುರ್ತು ಅರ್ಜಿ ವಿಚಾರಣೆಗೆ ಸುಪ್ರಿಂ ನಿರಾಕರಿಸಿದೆ. ಮೊದಲು ರೆಜಿಸ್ಟ್ರಾರ್ ಅರ್ಜಿ ಪರಿಶೀಲನೆ ನಡೆಸಲಿ ಎಂದು ಸುಪ್ರಿಂಕೋರ್ಟ್ ತಿಳಿಸಿದೆ.
ವಿಪ್ ನಿಯಮ ಉಲ್ಲಂಘನೆ ಹಾಗೂ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಎಲ್ಲಾ ಅತೃಪ್ತ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದರು. ಇದನ್ನು ಪ್ರಶ್ನಿಸಿ ಎಲ್ಲಾ 14 ಅತೃಪ್ತ ಶಾಸಕರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]sfirstlive.com
Discussion about this post