ಹುಬ್ಬಳ್ಳಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ವೇಳೆ ಬಸ್ಗಳಿಗೆ ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ, ನಮ್ಮವರು ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆಯಲ್ಲಿ ಕೆಲವು ಕಿಡಿಗೇಡಿಗಳು ಸೇರಿಕೊಂಡಿದ್ದಾರೆ ಅಂತಾ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ, ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. ರಾಜ್ಯದಲ್ಲಿ ಉಂಟಾಗಿದ್ದ ನೆರೆ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗಂಜಿ ಕೇಂದ್ರಗಳನ್ನು ಈಗಾಗಲೇ ಮುಚ್ಚಲಾಗಿದೆ. ಬೆಳೆ ಪರಿಹಾರ ಹಾಗೂ ಮನೆ ಪರಿಹಾರ ಸಂತ್ರಸ್ತರಿಗೆ ತಲುಪಿಲ್ಲ. ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಿ ಎಂದು ಡಿಸಿಗಳಿಗೆ ಸೂಚಿಸಿದ್ದೆ, ಆದ್ರೆ ಅದೂ ಆಗಿಲ್ಲ. ಈ ಸರ್ಕಾರಕ್ಕೆ ಕಣ್ಣು ಕಿವಿ ಎರಡೂ ಇಲ್ಲ ಎಂದು ವಾಗ್ದಾಳಿ ನಡೆಸಿದ್ರು. ಇನ್ನು ಕೋಯ್ನಾ ಡ್ಯಾಮ್ನಿಂದ ನೀರು ಬಿಡುವ ವಿಚಾರದಲ್ಲಿ ಸಮನ್ವಯ ಕೊರತೆ ಇದೆ ಎಂದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post