ಬೆಳಗಾವಿ: ಮಹಾರಾಷ್ಟ್ರದಲ್ಲಿ ಮಹಾಮಳೆ ಮುಂದುವರೆದಿದೆ. ಪ್ರವಾಹ ಭೀತಿ ಹಿನ್ನೆಲೆ ಜನರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹರಿತಕ್ರಾಂತಿ ವಸತಿ ಪ್ರದೇಶದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ವಸತಿ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಜಲಾವೃತವಾಗಿ ಸಂಪರ್ಕ ಕಡಿತಗೊಂಡಿದೆ. ಸಂಪರ್ಕ ಕಡಿತ ಹಿನ್ನೆಲೆ ಸುಮಾರು 200 ಕುಟುಂಬಗಳು ಅಗತ್ಯ ವಸ್ತುಗಳೊಂದಿಗೆ, ಸ್ವಯಂ ಪ್ರೇರಿತರಾಗಿ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post