ಬೆಂಗಳೂರು: ಮಾಜಿ ಸಚಿವ ರಾಮಲಿಂಗಾರೆಡ್ಡಿ ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಭೇಟಿ ಬಳಿಕ ಮಾತನಾಡಿದ ರಾಮಲಿಂಗಾರೆಡ್ಡಿ, ಕ್ಷೇತ್ರದ ಕೆಲವು ಅಭಿವೃದ್ಧಿ ಕೆಲಸಗಳ ಬಗ್ಗೆ ಸಿಎಂ ಜೊತೆ ಚರ್ಚಿಸಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಅಂತಾ ಹೇಳಿದ್ರು.
ಬಿಜೆಪಿ ಸರ್ಕಾರ ನೂರು ದಿನ ಪೂರೈಸಿದೆ. ಕೇಂದ್ರ ಸರ್ಕಾರದ ಸಹಕಾರ ಸಿಕ್ಕಿದ್ದರೆ ಬಿಜೆಪಿ ಸರ್ಕಾರದ ಆಡಳಿತಕ್ಕೆ ಒಳ್ಳೆಯ ಹೆಸರು ಬರುವ ಸಾಧ್ಯತೆಯಿತ್ತು. ಆದರೆ ಬರ, ಅತಿವೃಷ್ಟಿ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ರಾಜ್ಯ ಸರ್ಕಾರದ ಬಗ್ಗೆ ಜನರಲ್ಲಿ ಬೇಸರ ಉಂಟು ಮಾಡಿದೆ. ಅತಿವೃಷ್ಟಿ, ಬರದಂತ ಪರಿಸ್ಥಿತಿಯಲ್ಲಿ ಯಾವುದೇ ಸರ್ಕಾರವಿದ್ದರೂ ಕೇಂದ್ರದ ನೆರವು ಅಗತ್ಯ. ಆದರೆ ಬಿಜೆಪಿ ಸರ್ಕಾರಕ್ಕೆ ಕೇಂದ್ರ ಸರಿಯಾಗಿ ಸ್ಪಂದಿಸಿಲ್ಲ ಅಂತಾ ಹೇಳಿದ್ರು.
ಮಾಜಿ ಸಿಎಂ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಭೇಟಿಯಾಗಿರುವುದಕ್ಕೆ ರಾಜಕೀಯ ಕಾರಣ ಹುಡುಕುವುದು ಸರಿಯಲ್ಲ. ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ಸಾಧನೆ ಶೂನ್ಯ ಎಂದಿದ್ದಾರೆ. ಅವರು ಪ್ರತಿಪಕ್ಷ ನಾಯಕರಾಗಿರುವುದರಿಂದ ಅಂಕಿ ಅಂಶದ ಮಾಹಿತಿ ಇಟ್ಟುಕೊಂಡು ಹೇಳಿರಬಹುದು. ನಾನು ಕೇವಲ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಅಂತಾ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post