ಬೆಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ ಅಂತ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಡಿಸೆಂಬರ್ 21 ಅಥವಾ 22ರಂದು ನವದೆಹಲಿಗೆ ಹೋಗುತ್ತೇನೆ. ವರಿಷ್ಠರ ಜೊತೆ ಮಾತುಕತೆ ನಡೆಸಿ ಸಚಿವ ಸಂಪುಟ ವಿಸ್ತರಣೆ ಅಂತಿಮಗೊಳಿಸಲಾಗುವುದು ಎಂದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ. ಬಹುತೇಕ ಈ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಬಿಎಸ್ವೈ ತಿಳಿಸಿದರು.
ಸಂಪುಟ ವಿಸ್ತರಣೆ ಬಗ್ಗೆ ಯಾವುದೇ ಒತ್ತಡವಿಲ್ಲ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲರೂ ಸಚಿವರಾಗುತ್ತಾರೆ. ಇದರ ಜೊತೆಗೆ ಒಂದಿಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂಬ ಚಿಂತನೆ ಇದೆ. ಈ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ ನಡೆಸಿ ಅಂತಿಮ ಮಾಡುತ್ತೇವೆ ಅಂತ ಅವರು ಹೇಳಿದ್ರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post