ಮಂಗಳೂರು: ದೇಶದಲ್ಲಿ ಕೊರೊನಾ ಭೀತಿ ಹೆಚ್ಚಾಗಿರೋ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆ, ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದುಬೈನಿಂದ ಆಗಮಿಸಿದ ವ್ಯಕ್ತಿಯನ್ನು ಆರೋಗ್ಯ ಇಲಾಖೆಯ ಅಧಿಕಾರಿಗಳು ತಪಾಸಣೆ ನಡೆಸಿದಾಗ, ಅವರಲ್ಲಿ ಜ್ವರದ ಲಕ್ಷಣ ಕಂಡು ಬಂದಿದೆ. ಹೀಗಾಗಿ ವೆನ್ಲಾಕ್ ಆಸ್ಪತ್ರೆಯ ವಿಶೇಷ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post