ಮಂಗಳೂರು: ಕರ್ನಾಟಕದಲ್ಲಿ ಇಂದು ಮತ್ತೊಂದು ಕೊರೊನಾ ಕೇಸ್ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 22 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ.
ಭಟ್ಕಳ ಮೂಲದ ವ್ಯಕ್ತಿಗೆ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಇರೋದು ಕನ್ಫರ್ಮ್ ಆಗಿದೆ ಅಂತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಮಾಹಿತಿ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ 22 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಮಾರ್ಚ್ 19ರಂದು ಈತ ದುಬೈನಿಂದ ಬಂದಿದ್ದ ಎಂದು ತಿಳಿದು ಬಂದಿದೆ. ಸದ್ಯ ಕೊರೊನಾ ಸೋಂಕಿತನನ್ನ ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು, ಸೋಂಕಿತನೊಂದಿಗೆ 165 ಮಂದಿ ವಿಮಾನದಲ್ಲಿ ಪ್ರಯಾಣಿಸಿದ್ರು. ಈ ಎಲ್ಲಾ ಪ್ರಯಾಣಿಕರನ್ನೂ ಪತ್ತೆ ಹಚ್ಚಿ ಅವರನ್ನೂ ತಪಾಸಣೆಗೆ ಒಳಪಡಿಸಲು ಪ್ರಯತ್ನ ನಡೆಸಲಾಗುತ್ತಿದೆ ಅಂತ ಮಾಹಿತಿ ಲಭ್ಯವಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post