ಕೊಡಗು: ಕೊರೊನಾ ಹರಡದಂತೆ ಲಾಕ್ ಡೌನ್ ಹಿನ್ನೆಲೆ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಕೊಡಗು ಜಿಲ್ಲಾಡಳಿತ ಸಡಿಲಿಸಿದೆ. ಅಗತ್ಯ ವಸ್ತುಗಳನ್ನು ಖರೀದಿಸಲು ನಿಷೇಧಾಜ್ಞೆಯನ್ನು ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆವರೆಗೆ ನಿಷೇಧಾಜ್ಞೆ ಸಡಿಲ ಮಾಡಲಾಗಿದೆ.
ನಗರ ಪಟ್ಟಣಗಳ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಡಳಿತದಿಂದಲೇ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ. ಕುಶಾಲನಗರ, ಸೋಮವಾರಪೇಟೆ, ವಿರಾಜಪೇಟೆ ಸೇರಿ ಹಲವು ಪಟ್ಟಣಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಮಾಡಲಾಗಿದೆ. ನಿಷೇಧಾಜ್ಞೆ ಸಡಿಲಿಕೆ ಮಾಡಿರೋದ್ರಿಂದ ಮಡಿಕೇರಿ ಬಸ್ ನಿಲ್ದಾಣ ಮತ್ತು ಆರ್ಎಂಸಿಯಲ್ಲಿ ಬೆಳಗ್ಗೆಯಿಂದ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನ ತೆರೆದಿದ್ದಾರೆ. ಜನರು ಗುಂಪುಗೂಡದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post