ನವದೆಹಲಿ: ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೇಶದಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ಸೋಂಕು ಹರಡದಂತೆ ತಡೆಯಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗ್ತಿದೆ. ಅಲ್ಲದೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರ ಪರಿಹಾರ ನಿಧಿ ತೆರೆಯುವ ಮೂಲಕ ನಿಧಿ ಸಂಗ್ರಹಕ್ಕೂ ಮುಂದಾಗಿವೆ.
ಈ ಮಧ್ಯೆ ಕೇಂದ್ರ ಸರ್ಕಾರ ಎಲ್ಲ ಸಂಸದರ ಭತ್ಯೆ ಮತ್ತು ಪಿಂಚಣಿಯನ್ನು 30% ನಷ್ಟು ಕಡಿತಗೊಳಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್.. ಏಪ್ರಿಲ್ 1 ರಿಂದ ಒಂದು ವರ್ಷದ ಅವಧಿಗೆ ಎಲ್ಲಾ ಸಂಸದರ ಭತ್ಯೆ ಮತ್ತು ಪಿಂಚಣಿಯಲ್ಲಿ 30% ಕಡಿತ ಮಾಡಲಾಗಿದೆ, ಸಂಸತ್ ಕಾಯ್ದೆ 1954 ರ ಸಂಬಳ, ಭತ್ಯೆ ಮತ್ತು ಪಿಂಚಣಿ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.
ಅದರೊಂದಿಗೆ ಸಂಸದರ ನಿಧಿಯನ್ನು ಕೂಡ ಎರಡು ವರ್ಷಗಳ ಕಾಲ ತಡೆಹಿಡಿಯಲಾಗಿರೋ ಮಾಹಿತಿಯನ್ನು ಸಹ ಅವರು ನೀಡಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post