ಉಡುಪಿ: ಜಿಲ್ಲೆಯಲ್ಲಿ ಸದ್ಯಕ್ಕೆ ಕೊರೊನಾ ಪೀಡಿತರೆಲ್ಲಾ ಗುಣಮುಖರಾಗಿದ್ದಾರೆ. ಕೊರೊನಾ ಸೋಂಕು ತಗುಲಿದ್ದ ಎಲ್ಲಾ ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸದ್ಯ ಉಡುಪಿ ಕೊರೊನಾ ಮುಕ್ತ ಜಿಲ್ಲೆಯಾಗಿದೆ.
ಜಿಲ್ಲೆಯಲ್ಲಿ ಮೂವರು ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಅದರಲ್ಲಿ ಇಬ್ಬರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಮೂರನೇ ವ್ಯಕ್ತಿ ಕೂಡಾ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಅಂತಾ ಉಡುಪಿ ಡಿಹೆಚ್ಒ ತಿಳಿಸಿದ್ದಾರೆ.
ಎಲೆಕ್ಟ್ರಿಷಿಯನ್ ಕೆಲಸಕ್ಕಾಗಿ 29 ವರ್ಷದ ಯುವಕ ಕೇರಳಕ್ಕೆ ತೆರಳಿದ್ದ. ಮಾರ್ಚ್ 24ರಂದು ಕೇರಳದಿಂದ ಉಡುಪಿಗೆ ವಾಪಸ್ ಆಗಿದ್ದಾಗ ಈ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ನಗರದ ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿಟ್ಟು ಚಿಕಿತ್ಸೆ ನೀಡಲಾಗಿತ್ತು. ಇದೀಗ ಸಂಪೂರ್ಣ ಗುಣಮುಖನಾಗಿದ್ದು, ಕೊರೊನಾವನ್ನು ಜಯಿಸಿ ಮನೆಗೆ ಮರಳಿದ್ದಾನೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post