ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗ್ತಿದೆ. ಈ ಹಿನ್ನೆಲೆ ನಾಳೆಯಿಂದ ಗರ್ಭಿಣಿ ಮತ್ತು ಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮ ಆರಂಭಿಸಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಆದರೆ ನಿರ್ಬಂಧಿತ ಪ್ರದೇಶಗಳಲ್ಲಿ ಲಸಿಕೆ ಹಾಕುತ್ತಿಲ್ಲ. ಜೊತೆಗೆ ನಿರ್ಬಂಧಿತ ಪ್ರದೇಶಗಳಲ್ಲಿ ನಿಯೋಜನೆ ಆಗಿರುವವರು. ಕೊರೊನಾ ಆಸ್ಪತ್ರೆಯಲ್ಲಿ ನಿಯೋಜನೆ ಆಗಿರುವವರು, ಈ ಲಸಿಕಾ ಕಾರ್ಯಕ್ರಮದಲ್ಲಿ ಭಾಗಿಯಾಗುವಂತಿಲ್ಲ ಎಂದು ಅವರು ತಿಳಿಸಿದ್ರು.
ಜೊತೆಗೆ ಕೋವಿಡ್ 19 ಆಸ್ಪತ್ರೆಯಲ್ಲಿ ಲಸಿಕಾ ಕಾರ್ಯಕ್ರಮ ಇಲ್ಲ. ಮಗು ಅಥವಾ ಗರ್ಭಿಣಿ ತಾಯಿಗೆ ಜ್ವರ, ಕೆಮ್ಮು, ನೆಗಡಿ ಇದ್ದರೆ ಲಸಿಕೆ ಹಾಕುವಂತಿಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ ಅನೇಕ ಮಂಗಳಮುಖಿಯರಿಗೆ ಊಟಕ್ಕೆ ತೊಂದರೆಯಾಗಿದ್ದು, ಕೆಲವರು ಮೆಡಿಸಿನ್ ಇಲ್ಲದೇ ಪರದಾಡುವಂತಾಗಿದೆ. ಈ ವಿಚಾರ ಎರಡು ದಿನಗಳ ಹಿಂದೆ ಸರ್ಕಾರದ ಗಮನಕ್ಕೆ ಬಂದಿದೆ. ಅವರಿಗೆ ಅಗತ್ಯ ಆಹಾರ ಪೂರೈಕೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು. ಅವರಿಗೂ ರೇಷನ್ ಮತ್ತು ಔಷಧಿ ಪೂರೈಕೆಗೆ ಸರ್ಕಾರ ಆದೇಶಿಸಿದೆ. ಸಂಬಂಧಪಟ್ಟ ಅಧಿಕಾರಿಗಳು ಪೂರೈಕೆ ಮಾಡ್ತಿದ್ದಾರೆ ಎಂದು ಹೇಳಿದ್ರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post