ಬೆಂಗಳೂರು: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಾದ ಹಿನ್ನೆಲೆ, ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ, ಸಿಎಂ ಯಡಿಯೂರಪ್ಪ ಅವ್ರನ್ನ, ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿತು. ಈ ವೇಳೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ಕೈಬಿಡಲು ಮನವಿ ಸಲ್ಲಿಸಿದ್ದಾರೆ.
ಜೊತೆಗೆ ಸೋನಿಯಾ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೂಡ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿದಂತೆ ಪ್ರಮುಖ ನಾಯಕರು ಡಿ.ಕೆ ಶಿವಕುಮಾರ್ಗೆ ಸಾಥ್ ನೀಡಿದರು.
ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ಡಿ.ಕೆ ಶಿವಕುಮಾರ್, ಎಫ್ಐಆರ್ ದಾಖಲಿಸಿರುವುದು ಇಡೀ ದೇಶಕ್ಕೆ ಆಶ್ಚರ್ಯಕರ ವಿಷಯ. ನಮ್ಮ ನಾಯಕಿ ತಮ್ಮ ಬಳಿ ಇದ್ದ ಮಾಹಿತಿಯನ್ನ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿರೋ ಮಾಹಿತಿಯೂ ನಿಖರವಾಗಿದೆ. ಸಾಗರ ಠಾಣೆಯಲ್ಲಿ ದೂರು ದಾಖಲಿಸಿರೋ ವಕೀಲ ಪ್ರವೀಣ್, ಬಿಜೆಪಿ ಕಾರ್ಯಕರ್ತನ ಸಂಬಂಧಿಯಾಗಿದ್ದಾರೆ. ಹೀಗಾಗಿ ಎಫ್ಐಆರ್ ದಾಖಲಿಸಲಾಗಿದೆ. ಈ ಸಂಬಂಧ ನಾನು ಗೃಹ ಸಚಿವರ ಜೊತೆಯೂ ಮಾತನಾಡಿದ್ದೇನೆ. ಈಗ ಸಿಎಂ ಭೇಟಿ ಮಾಡಿದ್ದೇವೆ. ಅವರು ಸಹ ಈಗ ನನ್ನ ಗಮನಕ್ಕೆ ಬಂದಿದೆ ಎಂದ್ರು. ಠಾಣಾಧಿಕಾರಿ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಲು ಹೇಳಿದ್ದಾರೆ. ಕೂಡಲೇ ಬಿ ರಿಪೋರ್ಟ್ ಮಾಡಿ, ವಿತ್ ಡ್ರಾ ಮಾಡಲು ಹೇಳಿದ್ದಾರೆ ಎಂದ್ರು.
ಕೆಪಿಸಿಸಿ ಅಧ್ಯಕ್ಷ @DKShivakumar ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಸಿಎಂ @BSYBJP ಅವರನ್ನು ಭೇಟಿ ಮಾಡಿ,
ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರ ವಿರುದ್ಧ ಬಿಜೆಪಿ ಕಾರ್ಯಕರ್ತನ ಸುಳ್ಳು ದೂರು ಆಧರಿಸಿ ಎಫ್ಐಆರ್ ದಾಖಲಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿ, ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮನವಿ ಪತ್ರ ನೀಡಲಾಯಿತು. pic.twitter.com/XSn5xRTdYx
— D K Shivakumar, President, KPCC (@KPCCPresident) May 21, 2020
ಶ್ರೀಮತಿ ಸೋನಿಯಾ ಗಾಂಧಿಯವರ ವಿರುದ್ಧ ಬಿಜೆಪಿ ಕಾರ್ಯಕರ್ತನೊಬ್ಬ ನೀಡಿರುವ ಸುಳ್ಳು ದೂರು ಆಧರಿಸಿ ಎಫ್ಐಆರ್ ದಾಖಲಿಸಿರುವ ಸಾಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ಅಮಾನತು ಮಾಡಿ, ಅವರ ವಿರುದ್ಧ ಕೇಸು ದಾಖಲಿಸುವಂತೆ @CMofKarnataka, ಗೃಹ ಸಚಿವರು, @DgpKarnataka ಮತ್ತು ಶಿವಮೊಗ್ಗ ಎಸ್.ಪಿ ಗಳಿಗೆ ಬರೆದಿರುವ ಪತ್ರ. pic.twitter.com/qTAPhYHj4n
— DK Shivakumar (@DKShivakumar) May 21, 2020
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post