ಬೆಂಗಳೂರು: ಕೊರೊನಾದಿಂದ ಉದ್ಭವಿಸಿರುವ ಸಂಕಷ್ಟದ ಪರಿಣಾಮ ರಾಜ್ಯದ ನೇಕಾರರು ತಮ್ಮ ಉತ್ಪನ್ನಗಳಿಗೆ ಮಾರುಕಟ್ಟೆ ಸಿಗದೆ ತೀವ್ರ ತೊಂದರೆಗೆ ಈಡಾಗಿದ್ದು, ಈ ಸಮುದಾಯದ ಸಹಾಯಕ್ಕೆ ಮುಂದಾಗುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಮನವಿ ಮಾಡಿದ್ರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಭೇಟಿ ಮಾಡಿದ್ದ ಸಚಿವರ ನೇತೃತ್ವದ ನಿಯೋಗ, ರಾಜ್ಯ ಸರ್ಕಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸೀರೆಗಳನ್ನು ಸರಬರಾಜು ಮಾಡುತ್ತಿದ್ದು, ಈ ಸೀರೆಗಳನ್ನು ನೇರವಾಗಿ ನೇಕಾರರಿಂದಲೇ ಖರೀದಿಸಬೇಕು ಎಂದು ಮನವಿ ಮಾಡಿದ್ರು.
‘ನೇಕಾರರಿಗೆ ಆರ್ಥಿಕವಾಗಿ ಪೆಟ್ಟು ಬಿದ್ದಿದೆ’
ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಜಾರಿಯಾಗಿದ್ದರಿಂದ ರಾಜ್ಯದ ನೇಕಾರರ ಉತ್ಪನ್ನಗಳಿಗೆ ಮಾರುಕಟ್ಟೆ ಇಲ್ಲದೆ ಆ ಸಮುದಾಯ ಆರ್ಥಿಕವಾಗಿ ತೀವ್ರ ಪೆಟ್ಟು ತಿಂದಿದೆ ಅಂತಾ ಸಿಎಂಗೆ ನಿಯೋಗ ಮನವಿ ಮಾಡಿತು. ಸಚಿವರ ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ.ಎಸ್.ಯಡಿಯೂರಪ್ಪ ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುವುದಾಗಿ ತಿಳಿಸಿದ್ರು.
ಸಚಿವೆ ಶಶಿಕಲಾ ಜೊಲ್ಲೆ ನೇತೃತ್ವದ ನಿಯೋಗದಲ್ಲಿ ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಮಹಾಂತೇಶ ದೊಡ್ಡಗೌಡರ, ಅನಿಲ್ ಬೆನಕೆ, ಮಹದೇವಪ್ಪಾ ಯಾದವಾಡ ಉಪಸ್ಥಿತರಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post