ನವದೆಹಲಿ: ರಾಜ್ಯಸಭಾ ಸದಸ್ಯ ಹಾಗೂ ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ (64) ಇಂದು ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ಕಳೆದ ತಿಂಗಳಿನಿಂದ ಸಿಂಗಾಪುರದಲ್ಲಿರುವ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 2013 ರಲ್ಲಿ ಕಿಡ್ನಿ ಫೆಲ್ಯೂರ್ ಆಗಿತ್ತು.
ಅಮರ್ ಸಿಂಗ್ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಅಲ್ಲದೇ ಮುಲಾಯಂ ಸಿಂಗ್ ಯಾದವ್ ಅವರ ಆಪ್ತರಾಗಿದ್ದರು. 2010 ರಲ್ಲಿ ಪಕ್ಷದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿ ಪಕ್ಷದಿಂದ ಹೊರ ಬಂದಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post