ಬೆಂಗಳೂರು: ರಾಜ್ಯದ ಪ್ರವಾಹ ಪರಿಸ್ಥಿತಿಯನ್ನ ರಾಜ್ಯ ಸರ್ಕಾರ, ಪ್ರಧಾನ ಮಂತ್ರಿ ಮೋದಿಯವರ ಮುಂದೆ ಧೈರ್ಯದಿಂದ ಹೇಳಿ ಹೆಚ್ಚು ಪರಿಹಾರ ಪಡೆಯಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯಒತ್ತಾಯಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು ರಾಜ್ಯದ ಅತೀವೃಷ್ಟಿ ಬಗ್ಗೆ ರಾಜ್ಯ ಸಚಿವರ ಜೊತೆ ಪ್ರಧಾನಿಗಳು ಸಭೆ ನಡೆಸುತ್ತಿರುವುದು ಸ್ವಾಗತಾರ್ಹ. ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷ್ಯ ತೋರಿದ್ದರು. ಆದರೆ ಈ ಬಾರಿಯಾದರೂ ಪ್ರಧಾನಿ ಮೋದಿ ಎಚ್ಚೆತ್ತುಕೊಂಡಿದ್ದಾರೆ. ಈ ಅವಕಾಶವನ್ನು ರಾಜ್ಯ ಸರ್ಕಾರ ಸರಿಯಾಗಿ ಬಳಸಕೊಳ್ಳಬೇಕು ಎಂದಿದ್ದಾರೆ.
ಸಭೆಯಲ್ಲಿ ಭಾಗವಹಿಸುತ್ತಿರುವ ಸಚಿವರಾದ ಬಸವರಾಜ ಬೊಮ್ಮಾಯಿ ಮತ್ತು ಆರ್. ಅಶೋಕ್ ಅವರು ರಾಜ್ಯದ ಜನರ ಹಿತದೃಷ್ಟಿಯಿಂದಾದರೂ ಅತಿವೃಷ್ಟಿ ಪರಿಸ್ಥಿತಿಯನ್ನು ಸ್ವಲ್ಪ ಧೈರ್ಯ ಮಾಡಿ ವಿವರಿಸಿ ಹೆಚ್ಚು ಪರಿಹಾರ ಪಡೆಯುವ ಪ್ರಯತ್ನ ಮಾಡಬೇಕು. ಕಳೆದ ವರ್ಷದ ಅತಿವೃಷ್ಟಿಯ ಅಂದಾಜು ನಷ್ಟ ₹1,00,000 ಕೋಟಿ. ಆದರೆ ₹50,000 ಕೋಟಿ ನಷ್ಟ ಎಂದುರಾಜ್ಯ ಸರ್ಕಾರದ ವರದಿ ಮಾಡಿದೆ. ಅಲ್ಲದೇ ₹35,000 ಕೋಟಿ ಪರಿಹಾರ ಕೇಳಿತ್ತು. ಕೊನೆಗೆ ಕೇಂದ್ರ ಸರ್ಕಾರ ಕೇವಲ ರೂ.1860 ಕೋಟಿ ಮಾತ್ರ. ರಾಜ್ಯದ ಸಚಿವರು ಹಳೆಯ ಬಾಕಿಯನ್ನೂ ಕೇಳುವ ಧೈರ್ಯ ಮಾಡಲಿ ಎಂದಿದ್ದಾರೆ.
ಇನ್ನು ಕಳೆದ ವರ್ಷ ಸರ್ಕಾರ ಅತಿವೃಷ್ಟಿಯ ವರದಿ ಕಳಿಸಿರುವುದು ಆಗಸ್ಟ್ವರೆಗಿನ ಹಾನಿ ಬಗ್ಗೆ ಮಾತ್ರ. ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಅತಿವೃಷ್ಟಿ ವರದಿ ಕಳಿಸದೆ ಸರ್ಕಾರ ನೊಂದ ಜನತೆಗೆ ಮೋಸ ಮಾಡಿದೆ .ಈ ಬಾರಿ ಪರಿಹಾರವನ್ನು ಕೇಳುವಾಗ ಇದನ್ನು ಸಹ ಮೋದಿ ಅವರ ಗಮನಕ್ಕೆ ತರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಅತಿವೃಷ್ಟಿ ಬಗ್ಗೆ @PMOIndia ರಾಜ್ಯ ಸಚಿವರ ಸಭೆ ನಡೆಸುತ್ತಿರುವುದು ಸ್ವಾಗತಾರ್ಹ.
ಕಳೆದ ಬಾರಿ ರಾಜ್ಯ ಅತಿವೃಷ್ಟಿಯಿಂದ ತತ್ತರಿಸುತ್ತಿರುವಾಗ ಕರ್ನಾಟಕದ ಕಡೆ ತಿರುಗಿ ನೋಡದೆ ನಿರ್ಲಕ್ಷಿಸಿದ್ದ ಪ್ರಧಾನಿ ಈ ಬಾರಿಯಾದರೂ ಎಚ್ಚೆತ್ತುಕೊಂಡಿದ್ದಾರೆ.
ಈ ಅವಕಾಶವನ್ನು ರಾಜ್ಯ ಬಳಸಿಕೊಳ್ಳಬೇಕು.
1/10#FailedFloodMGmt— Siddaramaiah (@siddaramaiah) August 10, 2020
ಅಲ್ಲದೇ, ನಿನ್ನೆ ತಾನೆ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ ರೈತರಿಗಾಗಿ 1 ಲಕ್ಷ ಕೊಟಿ ಪ್ಯಾಕೇಜ್ ಬಗ್ಗೆ ಕೂಡ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ಹಳೆಯ ಪ್ಯಾಕೇಜ್ಅನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ರೈತರ ದಾರಿ ತಪ್ಪಿಸಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.
.@PMOIndia
ಭಾನುವಾರ ಘೋಷಿಸಿರುವ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಪ್ಯಾಕೇಜ್,
ಕಳೆದ ಮೇ ತಿಂಗಳಲ್ಲಿ ಹಣಕಾಸು ಸಚಿವೆ @nsitharaman ಘೋಷಿಸಿದ್ದ ಕೋವಿಡ್ ಪರಿಹಾರ ಯೋಜನೆಯ ಭಾಗವಾಗಿದೆ.ಅದನ್ನೇ ಹೊಸ ಪ್ಯಾಕೇಜ್ ಎಂದು ಬಿಂಬಿಸಿ ಪ್ರಧಾನಿಯವರು ರೈತರ ದಾರಿ ತಪ್ಪಿಸಿದ್ದಾರೆ.
5/10#FailedFloodMGmt— Siddaramaiah (@siddaramaiah) August 10, 2020
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post