ಹುಬ್ಬಳ್ಳಿ: ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ ಅವರ ಪುತ್ರ ಸೂರಜ್ ಹಾಲಹರವಿ(18) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ಸ್ವಗೃಹದಲ್ಲಿ ತಡರಾತ್ರಿ ನೇಣಿಗೆ ಶರಣಾಗಿದ್ದಾನೆ.
ಪುತ್ರ ತಡರಾತ್ರಿ ಮನೆಯ ಕೋಣೆಯಲ್ಲಿ ನೇಣುಬಿಗಿದುಕೊಂಡಿದ್ದನ್ನು ಕಂಡ ಪೋಷಕರು ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆತ ಮನೆಯಲ್ಲೇ ಮೃತಪಟ್ಟಿರುವುದನ್ನು ದೃಢಪಡಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಸೂರಜ್ ಆತ್ಮಹತ್ಯೆಗೆ ಕಾರಣವೇನು ಅನ್ನೋದು ಪೊಲೀಸರ ತನಿಖೆಯಿಂದ ತಿಳಿದುಬರಬೇಕಿದೆ. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ವೀರಭದ್ರಪ್ಪ ಹಾಲಹರವಿ 2008ರಲ್ಲಿ ಶಾಸಕರಾಗಿದ್ದರು.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post