ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಹಾಗೂ ಆಕೆಯ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ದಾಖಲಾಗಿರುವ ದೇಶ ದ್ರೋಹ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್ ನೀಡಿದ್ದಾರೆ.
ನಟಿ ರಾಣಾವತ್ ಸಹೋದರಿಯರ ಮೇಲೆ ಕಳೆದ ಒಂದು ವಾರದ ಹಿಂದಷ್ಟೇ ದೇಶದ್ರೋಹ ಪ್ರಕರಣ ದಾಖಲಾಗಿತ್ತು. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಕಂಗನಾ ಹಾಗೂ ಅವರ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ 124-ಎ ( ದೇಶದ್ರೋಹ) ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದ್ದವು.
ಕೋಮು ಗಲಭೆ ಪ್ರಚೋದಿಸಲು ಯತ್ನಿಸಿದ ಆರೋಪದ ಮೇಲೆ ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಅವರ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮುಂಬೈ ನ್ಯಾಯಾಲಯ ಪೊಲೀಸರಿಗೆ ಇಂದು ಆದೇಶ ಹೊರಡಿಸಿತ್ತು. ಕಾಸ್ಟಿಂಗ್ ನಿರ್ದೇಶಕ ಸಾಹಿಲ್ ಅಶ್ರಫ್ ಅಲಿ ಸಯ್ಯದ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಬಾಂದ್ರಾ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯದೇವ್ ವೈ ಗುಲೆ ಎಫ್‌ಐಆರ್ ದಾಖಲಿಸುವಂತೆ ಆದೇಶ ಹೊರಡಿಸಲಾಗಿತ್ತು. ಇದೀಗ ಬಾಂದ್ರಾ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post