ಬೆಳಗಾವಿ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ಹೆಚ್ಚಳವಾಗುತ್ತಿದೆ. ಇದನ್ನ ಅರಿತ ಪೊಲೀಸ್ ಇಲಾಖೆ ಮುಂಜಾಗೃತ ಕ್ರಮವಾಗಿ ಸುವರ್ಣ ಸೌಧದ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಡಾ. ಕೆ ತ್ಯಾಗರಾಜನ್ ಆದೇಶ ಹೊರಡಿಸಿದ್ದಾರೆ. ನವೆಂಬರ್ 24 ರಿಂದ ಜನವರಿ 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ನೀಡಲಾಗಿದೆ.
ಸಿಆರ್ ಪಿಸಿ 1973 ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿ ಇರಲಿದ್ದು, ಸುವರ್ಣ ಸೌಧದ ಸುತ್ತ 5 ಜನಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ, ಸಭೆ ಸಮಾರಂಭ ನಡೆಸುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಡಿಸೆಂಬರ್ 5 ರಂದು ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ಗೆ ಕರೆ ನೀಡಿವೆ. ಸುವರ್ಣ ಸೌಧದ ಮುಂಭಾಗದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post