ಚಾಮರಾಜನಗರ: ಸಿಎಂ ಯಡಿಯೂರಪ್ಪ ಇಂದು ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿದ್ದು ಮಲೈ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು.. ಕ್ಷೇತ್ರಾಭಿವೃದ್ಧಿ ಪ್ರಾಧಿಕಾರಕ್ಕೆ ಶಾಲೆ ದತ್ತು ತೆಗೆದುಕೊಳ್ಳುವುದರ ಬಗ್ಗೆ ತಿಳಿಸಿದ್ದು, 15 ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಬಗ್ಗೆ ಆಡಳಿತ ಮಂಡಳಿ ಒಪ್ಪಿಗೆ ನೀಡಿದೆ. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಮೀನಾಮೇಷ ಎಣಿಸುವುದಿಲ್ಲ. ಎಷ್ಟೇ ಕಷ್ಟ ಆದರೂ ಕ್ಷೇತ್ರದ ಅಭಿವೃದ್ಧಿಗೆ ಬದ್ಧನಾಗಿದ್ದೇವೆ. ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಬೇಕಾದ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದೇನೆ. ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ. ಇನ್ನೂ ಚಾಮರಾಜನಗರ ತಾಲೂಕು ಕೇಂದ್ರಕ್ಕೆ ಯಾವಾಗ ಬೇಕಾದರು ಬರುತ್ತೇನೆ, ಕರೆದಾಗ ಬರುತ್ತೇನೆ ಎಂದಿದ್ದಾರೆ.
ಇನ್ನು ಚಾಮರಾಜನಗರ ವಿಧಾನಸಭೆ ಕ್ಷೇತ್ರಕ್ಕೆ ಕಾಲಿಟ್ಟರೆ ಅಧಿಕಾರ ಹೊರಡು ಹೋಗುತ್ತದೆ ಅನ್ನೋ ಮಾತು ರಾಜಕಾರಣದಲ್ಲಿ ವಾಡಿಕೆಯಲ್ಲಿದೆ. ಅದರಂತೆ ಕಳೆದ ಎರಡು ದಿನಗಳಿಂದ ಸಿಎಂ ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯ ಪ್ರವಾಸದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ನಿನ್ನೆ ಹಾಗೂ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿರುವ ಸಿಎಂ ಬಿಎಸ್ವೈ ಚಾಮರಾಜನಗರ ವಿಧಾನಸಭೆ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಈ ಸಂಬಂಧ ಮಾಧ್ಯಮಗಳ ಜೊತೆ ಮಾತನಾಡಿ.. ಚಾಮರಾಜನಗರ ಕ್ಷೇತ್ರಕ್ಕೆ ಕರೆದಾಗ ಬರುತ್ತೇನೆ ಅಂತಾ ಹೇಳಿದ್ದಾರೆ.
ಇದನ್ನೂ ಓದಿ: ಇಂದಿನಿಂದ ಸಿಎಂ ಚಾಮರಾಜನಗರ ಪ್ರವಾಸ; ಆದ್ರೆ ಚಾಮರಾಜನಗರ ಕ್ಷೇತ್ರಕ್ಕೆ ಕಾಲಿಡದೇ ಸುತ್ತಾಟ
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post