ಬೆಂಗಳೂರು: ಖಾಸಗಿ ಶಾಲೆಗಳ ಶುಲ್ಕ ವಸೂಲಿ ಹಾಗೂ ಶುಲ್ಕ ಕಟ್ಟದ ಮಕ್ಕಳ ಆನ್ಲೈನ್ ಐಡಿ ಬ್ಲಾಕ್ ಮಾಡುವ ವಿಚಾರವಾಗಿ ನಾಳೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆಯಲಿದೆ.
ಸಚಿವ ಸುರೇಶ್ ಕುಮಾರ್ ಸೂಚನೆ ಮೇರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಖಾಸಗಿ ಶಾಲೆಗಳ ಸಂಘಟನೆ ಪ್ರತಿನಿಧಿಗಳ ಜೊತೆ ನಾಳೆ ಬೆಳಗ್ಗೆ 11 ಗಂಟೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಸಭೆ ನಡೆಸಲಿದ್ದಾರೆ.
ಖಾಸಗಿ ಶಾಲಾ ಪ್ರತಿನಿಧಿಗಳ ಜೊತೆ ಚರ್ಚಿಸಿ ವರದಿ ನಿಯಮಗಳ ವ್ಯಾಪ್ತಿಯಲ್ಲಿ ಪರಿಶೀಲಿಸಿ ಸಚಿವ ಸುರೇಶ್ ಕುಮಾರ್ ನಿರ್ಧಾರ ಪ್ರಕಟ ಪಡಿಸಲಿದ್ದಾರೆ. ಸಭೆಯಲ್ಲಿ ಕ್ಯಾಮ್ಸ್ ,ಕುಸುಮಾ, ರೂಪ್ಸಾ ಸಿಬಿಎಸ್ ಖಾಸಗಿ ಶಾಲೆಗಳ ಸಂಘಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post