ಗದಗ: ಇಂದು ನಗರದ ಟಿಪ್ಪು ಸರ್ಕಲ್ ಬಳಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಶಾಸಕ ಬಸನಗೌಡ ಯತ್ನಾಳ್ ಅವರ ಪ್ರತಿಕೃತಿ ದಹನ ಮಾಡುವಾಗ, ಸ್ವಲ್ಪದರಲ್ಲೇ ಅನಾಹುತವೊಂದು ತಪ್ಪಿದೆ.
ಮರಾಠ ಅಭಿವೃದ್ಧಿ ನಿಗಮ ರಚನೆಯನ್ನು ವಿರೋಧಿಸಿ ಇಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ಕೊಟ್ಟಿವೆ. ಈ ಹಿನ್ನೆಲೆಯಲ್ಲಿ ಗದಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೆಳಗ್ಗಿನಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ನಡುವೆ ಪೊಲೀಸರ ವಿರೋಧದ ನಡುವೆಯೂ ಕರವೇ ಕಾರ್ಯಕರ್ತರು ಯತ್ನಾಳ್ರ ಪ್ರತಿಕೃತಿಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಭಗ್ಗನೆ ಹೊತ್ತಿಕೊಂಡಿದ್ದು, ಈ ವೇಳೆ ಎಲ್ಲಾ ಪ್ರತಿಭಟನಾಕಾರರು ದಿಕ್ಕಾಪಾಲಾಗಿ ಓಡಿದ್ರು. ಇದರಿಂದ ನಡೆಯಬೇಕಿದ್ದ ಭಾರೀ ಅನಾಹುತ ತಪ್ಪಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post