ಕೊಪ್ಪಳ: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ಗೆಕರೆ ನೀಡಿವೆ. ರಾಜ್ಯದ್ಯಂತ ಪ್ರತಿಭಟನೆಯ ಕಾವು ಜೋರಾಗಿದ್ದು, ಕೆಲವೆಡೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಪ್ಪಳಲ್ಲಿ ರೈತಪರ ಸಂಘಟನೆಯ ಬೆಂಬಲದೊಂದಿಗೆ ನಡೆಯುತ್ತಿರುವ ಪ್ರತಿಭಟನೆಯ ಕಾವು ಜೋರಾಗಿದೆ. ಪ್ರತಿಭಟನಾಕಾರರು ನಗರದ ಗಂಜವೃತ್ತದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರ ಪಡೆ ಪ್ರತಿಭಟನಾಕಾರರನ್ನು ಸುತ್ತುವರೆದು, ಹಲವು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಪೊಲೀಸರ ಹಾಗೂ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಪೊಲೀಸರು ರೈತಪರ ಸಂಘಟನಾಕಾರರನ್ನು ಪೊಲೀಸ್ ವಾಹನದಲ್ಲಿ ಎತ್ತಿಹಾಕಿದ್ದಾರೆ.
ಇತ್ತ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಪ್ರತಿಭನೆಯ ಕಾವು ಜೋರಾಗೇ ಇದ್ದು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾವು ಱಲಿ ನಡೆಸುತ್ತಿದ್ದ ಮಾರ್ಗಬದಲಿಸಿದ ಪ್ರತಿಭಟನಾಕಾರರು ನಗರ ಬಸ್ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದ್ದಾರೆ. ಇದನ್ನು ಕಂಡ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಸದ್ಯ ಪೊಲೀಸರು ಎಲ್ಲಾ ಪ್ರತಿಭಟನಾಕಾರರನ್ನು ತಮ್ಮ ವಶಕ್ಕೆ ಪಡೆದಿದ್ದಾರೆ.
ಗದಗದಲ್ಲೂ ಸಹ 20 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರು ಡಿಸಿ ಆಫೀಸ್ ಎದುರುಗಡೆ ರಸ್ತೆ ತಡೆ ನಡೆಸಿ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ ಕಾರಣ ಅಲ್ಲಿದ್ದ ಎಲ್ಲಾ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post