ಚಿಕ್ಕಬಳ್ಳಾಪುರ: ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ (78) ಹೃದಯಾಘಾತದಿಂದ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನ ಪ್ರತಿನಿಧಿಸುತ್ತಿದ್ದ ರೇಣುಕಾ ಅವರು, 1977 ರಿಂದ 1982ರವರೆಗೂ ಗುಂಡೂರಾವ್ರ ಸರ್ಕಾರದಲ್ಲಿ ರೇಷ್ಮೆ ಖಾತೆ, ಕ್ರೀಡಾ ಮತ್ತು ಯುವಜನ ಸೇವೆ ಮತ್ತು ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. 1989ರಲ್ಲಿ ಚಿಕ್ಕಬಳ್ಳಾಪುರದ ಮೀಸಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅವರು ರೇಣುಕಾ ರಾಜೇಂದ್ರನ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ರೇಣುಕಾ ದಲಿತರ ಪರ ದೊಡ್ಡ ಧ್ವನಿಯಾಗಿದ್ರು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರಿಯ ನಾಯಕಿ, ಮಾಜಿ ಸಚಿವೆ ಶ್ರೀಮತಿ ರೇಣುಕಾ ರಾಜೇಂದ್ರನ್ ಅವರ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ದೇವರಾಜು ಅರಸು ಅವರ ಸಾಮಾಜಿಕ ನ್ಯಾಯ ಪರಿಕಲ್ಪನೆಯಿಂದ ರಾಜಕೀಯ ಪ್ರವೇಶಿಸಿದ ಶ್ರೀಮತಿ ರೇಣುಕಾ ಅವರು ಮೂರು ಬಾರಿ ಶಾಸಕರಾಗಿ, ಶ್ರೀ ಗುಂಡೂರಾವ್ ಅವರ ಸಂಪುಟದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. (1/2) pic.twitter.com/bITXe9W6Gl
— Dr Sudhakar K (@mla_sudhakar) December 16, 2020
ಚಿಕ್ಕಬಳ್ಳಾಪುರ ಮಾಜಿ ಶಾಸಕಿ, ರೇಷ್ಮೆ, ಕ್ರೀಡೆ, ಯುವಜನ ಸೇವೆ ಖಾತೆ ಮಾಜಿ ಸಚಿವೆ ರೇಣುಕಾ ರಾಜೇಂದ್ರನ್ ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. #OmShanti pic.twitter.com/0hjWJX6h2n
— B Sriramulu (@sriramulubjp) December 16, 2020
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post