ಗದಗ: ಜಿಲ್ಲೆಯಲ್ಲಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರಿಗೆ ಕೊರೊನಾ ಟೆಸ್ಟ್ ಮಾಡಿಸಲಾಗಿತ್ತು. ಅವರ ಪೈಕಿ 10 ಶಿಕ್ಷಕರ ವರದಿ ಪಾಸಿಟಿವ್ ಬಂದಿದೆ.
ಈ ಬಗ್ಗೆ ಗದಗ ಡಿಡಿಪಿಐ ಜಿ.ಎಂ ಬಸಲಿಂಗಪ್ಪ ಮಾಹಿತಿ ನೀಡಿದ್ದಾರೆ. ಶಾಲೆ ಆರಂಭಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ 6,665 ಶಿಕ್ಷಕರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಅದರಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ 9 ಶಿಕ್ಷಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ, ನರಗುಂದ ತಾಲೂಕಿನ ಜಗಾಪೂರದ ಓರ್ವ ಶಿಕ್ಷಕರಿಗೆ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ
[email protected]
Discussion about this post